4:23 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅನರ್ಹ: ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್​ ಗೆ ಅರ್ಜಿ

02/09/2023, 19:57

ಹಾಸನ(reporterkarnataka.com): ಚುನಾವಣಾ ಅಕ್ರಮ ಆರೋಪದ ಮೇಲೆ ಸಂಸದ ಸ್ಥಾನದಿಂದ ಅನರ್ಹಗೊಂಡ ಜೆಡಿಎಸ್ ನ ಪ್ರಜ್ವಲ್‌ ರೇವಣ್ಣ ಅವರು ತಾತ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರೊಂದಿಗೆ ಚರ್ಚಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಹೈಕೋರ್ಟ್ ಪ್ರಜ್ವಲ್ ಅವರನ್ನು ಸಂಸತ್ ಸ್ಥಾನದಿಂದ ಅನರ್ಹ ಗೊಳಿಸಿ, ಅವರು 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶ ನೀಡಿತ್ತು.
ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್‌ ರೇವಣ್ಣ ತಯಾರಿ ನಡೆಸಿದ್ದಾರೆ.
ಸೋಮವಾರವೇ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್‌ ರೇವಣ್ಣ ಮುಂದಾಗಿದ್ದಾರೆ. ತಾತ ಮಾಜಿ ಪ್ರಧಾನಿ ದೇವೇಗೌಡರು, ತಂದೆ ಮಾಜಿ ಸಚಿವ ರೇವಣ್ಣ ಜೊತೆ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇಂದು ಹೊಳೆನರಸೀಪುರದ ದೇವೇಶ್ವರ ಹಾಗೂ ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ಶ್ರಾವಣ ಮಾಸದ ಪೂಜೆಯಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಅವರು ನಿನ್ನೆಯೇ ಹುಟ್ಟೂರಿಗೆ ಆಗಮಿಸಿದ್ದಾರೆ. ಸದ್ಯ ಇಂದು ಪೂಜೆ ಬಳಿಕ ಕೋರ್ಟ್ ತೀರ್ಪಿನ ಬಗ್ಗೆ ಪ್ರಜ್ವಲ್ ಹಾಗೂ ಕುಟುಂಬಸ್ಥರು ಚರ್ಚೆ ನಡೆಸಲಿದ್ದಾರೆ. ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ ತೀರ್ಪಿಗೆ ತಡೆಯಾಜ್ಞೆ ತರುವ ಬಗ್ಗೆ ಚರ್ಚಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು