ಇತ್ತೀಚಿನ ಸುದ್ದಿ
ಸಮಸ್ಯೆ ಹೇಳಲು ಹೋದ ಮಹಿಳೆಯ ಕೆನ್ನೆಗೆ ಬಾರಿಸಿದ ವಸತಿ ಸಚಿವ ಸೋಮಣ್ಣ: ವೀಡಿಯೊ ವೈರಲ್
23/10/2022, 12:13

ಚಾಮರಾಜನಗರ(reporterkarnataka.com): ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರ ಕೆನ್ನೆಗೆ ವಸತಿ ಮತ್ತು ಮೂಲ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೊಡೆದ ಘಟನೆ ನಡೆದಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.
ಗುಂಡ್ಲುಪೇಟೆ ತಾಲೂಕಿನ ಹಂಗಳದಲ್ಲಿ ನಡೆದ ಹಕ್ಕುಪತ್ರ ವಿತರಣೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಸಚಿವರು ಕೆಂಪಮ್ಮ ಎಂಬ ಮಹಿಳೆಯ ಕೆನ್ನೆಗೆ ಹೊಡೆಯುವ ದೃಶ್ಯ ರೆಕಾರ್ಡ್ ಆಗಿದ್ದು, ಇದೀಗ ವೈರಲ್ ಆಗುತ್ತಿದೆ.
ಹಂಗಳ ಗ್ರಾಮ ಪಂಚಾತಿಯ 173 ಮಂದಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಫಲಾನುಭವಿಗಳ ಆಯ್ಕೆ ಸರಿಯಾಗಿ ನಡೆದಿಲ್ಲ. ನಿವೇಶನ ಇದ್ದವರಿಗೆ ಮತ್ತೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಕೆಲವು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿ ಹೋಗಿ ಸಮಸ್ಯೆ ಹೇಳಿದಾಗ ಸೋಮಣ್ಣ ಕೆನ್ನೆಗೆ ಬಾರಿಸಿದರು.