7:35 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ನಾಗರಬೆಂಚಿ: ಕನಕಮೂರ್ತಿ ಅನಾವರಣ; ಸಾಮೂಹಿಕ ವಿವಾಹ ವೈಭವ

05/12/2021, 18:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಾಗರಬೆಂಚಿ ಗ್ರಾಮದಲ್ಲಿ ನೂತನ ಕನಕ ಮೂರ್ತಿಯ ಅನಾವರಣ ಮತ್ತು ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಕಾರ್ಯಕ್ರಮ ಜರಗಿತು. 

ಮಸ್ಕಿಯ ಷಟಸ್ಥಲ ಬ್ರಹ್ಮ ಹೊರ ರುದ್ರಮುನಿ ಶಿವಾಚಾರ್ಯರು, ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕನಕ ಮೂರ್ತಿ ಪ್ರತಿಷ್ಠಾಪನ ಮಾಡುವುದರ ಜತೆಗೆ ಸಾಮೂಹಿಕ ವಿವಾಹಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿರುವ 11 ಜೋಡಿ ದಂಪತಿಗಳಿಗೆ ಶುಭ ಹಾರೈಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಮಸ್ಕಿಯ ವರ ರುದ್ರಮುನಿ ಶಿವಾಚಾರ್ಯರು, ಸರ್ವಧರ್ಮದವರು ಸೇರಿ ಒಳ್ಳೆಯ ಕಾರ್ಯಕ್ರಮ ಮಾಡುತ್ತಿರುವುದು ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವು ಅತ್ಯಂತ ಪುಣ್ಯದ ಕೆಲಸ ಎಂದು ಹೇಳಿದರು.

 ಪ್ರತಿಯೊಬ್ಬ ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಮನಸ್ಸಿಗೆ ಮತ್ತು ಜೀವನ ನೆಮ್ಮದಿ ಸಿಗುತ್ತದೆ. ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಪುಣ್ಯದ ಕೆಲಸ ಬರುತ್ತದೆ ಎಂದು ನುಡಿದರು.

ನ್ಯಾಯವಾದಿ ಗುಡಿಹಾಳ ನಿರುಪಾದೆಪ್ಪ, ಮಾಜಿ ಸಂಸದ ಕೆ. ವಿರುಪಾಕ್ಷಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು