12:02 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಸಂಡೂರು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ಕೆ.ಜೆ. ಜಾರ್ಜ್ ಪ್ರಚಾರ: ಕೇಂದ್ರದ ವಿರುದ್ಧ ಕಿಡಿ

04/11/2024, 23:22

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಸೋಮವಾರ ಪ್ರಚಾರ ಕೈಗೊಂಡರು. ‘ಓ ಮೇಘ ಬಿಲಿವರ್ಸ್ ಚರ್ಚ್’ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ‘ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್‌ಗೆ ಮತ ನೀಡಿ, ಅನ್ನಪೂರ್ಣ ಅವರನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.
‘ಕರ್ನಾಟಕ ಇಂದು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಕೊಡುತ್ತಿದೆ. ಆದರೆ ನಮಗೆ ಕೇಂದ್ರದಿಂದ ಸಿಗುತ್ತಿರುವುದು ಅಲ್ಪ ಪಾಲು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಇಂಥ ಅನ್ಯಾಯ ಮಾಡಬಾರದು. ಎಲ್ಲರನ್ನೂ ಜೊತೆ ಸೇರಿಸಿಕೊಂಡು, ಮುನ್ನಡೆಯುತ್ತಿರುವ ಪಕ್ಷ ಕಾಂಗ್ರೆಸ್‌. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಿ’ ಎಂದು ಮನವಿ ಮಾಡಿದರು.
ಅಭ್ಯರ್ಥಿ ಅನ್ನಪೂರ್ಣ ಮಾತನಾಡಿ, ‘ಸಂಡೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷ ಮಹಿಳೆಗೆ ಅವಕಾಶ ನೀಡಿದೆ. ಈ ಹಿಂದೆ ಬೆಂಬಲ ನೀಡಿದಂತೆ ಈ ಬಾರಿಯೂ ಅವಕಾಶ ನೀಡಿ’ ಎಂದು ಮನವಿ ಮಾಡಿದರು.
ಎಐಸಿಸಿ ಮುಖಂಡರಾದ ಗೋಪಿನಾಥ್, ಕೆಪಿಸಿಸಿ ವಕ್ತಾರ ವೆಂಕಟೇಶ ಹೆಗಡೆ, ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು