10:30 PM Monday22 - December 2025
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಸಂಡೂರು ವಿಧಾನಸಭೆ ಉಪ ಚುನಾವಣೆ: ಶೇ.76.24ರಷ್ಟು ಮತದಾನ

13/11/2024, 22:01

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರು ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ, ಸಂಡೂರು ಕ್ಷೇತ್ರ ವ್ಯಾಪ್ತಿಯ 253 ಮತಗಟ್ಟೆಗಳಲ್ಲಿ ನ.13ರಂದು ಬುಧವಾರದಂದು ಸುಸೂತ್ರ ಹಾಗೂ ಶಾಂತಿಯುತ ಮತದಾನ ನಡೆದಿದ್ದು, ಒಟ್ಟು ಶೇ.76.24 ರಷ್ಟು ಮತದಾನ ಪ್ರಮಾಣವಾಗಿದೆ.
ಚುನಾವಣಾ ಆಯೋಗದ ನಿಯಮದಂತೆ ಮತದಾನ ಪ್ರಕ್ರಿಯೆಯು ಬೆಳಿಗ್ಗೆ 7 ಗಂಟೆಗೆ ಪ್ರಾರಂಭಗೊಂಡಿತು. ನಿಧಾನಗತಿಯಿಂದ ಆರಂಭಗೊಂಡು ಸಂಜೆ ಹೊತ್ತಿಗೆ ಬಿರುಸು ಪಡೆಯಿತು. ಎಲ್ಲಾ ಮತಗಟ್ಟೆಗಳಲ್ಲಿ ಮತದಾರರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದು ಕಂಡುಬಂದಿತು.

ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇ.09.07ರಷ್ಟು, 11 ಗಂಟೆವರೆಗೆ ಶೇ.26.96ರಷ್ಟು, ಮಧ್ಯಾಹ್ನ 1 ಗಂಟೆವರೆಗೆ ಶೇ.43.46ರಷ್ಟು, ಮಧ್ಯಾಹ್ನ 3 ಗಂಟೆವರೆಗೆ ಶೇ.58.10ರಷ್ಟು, ಸಂಜೆ 5 ಗಂಟೆವರೆಗೆ 71.47ರಷ್ಟು ಹಾಗೂ ಮತದಾನ ಅವಧಿ ಮುಕ್ತಾಯ ನಂತರ ಅಂತಿಮವಾಗಿ ಶೇ.76.24ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ.
*ಮತದಾನ ವಿವರ:* ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,402 ಮತದಾರರಿದ್ದು, ಅದರಲ್ಲಿ 1,80,189 ಮತದಾರರು ತಮ್ಮ ಮತದ ಹಕ್ಕನ್ನು ಚಲಾಯಿಸಿದ್ದಾರೆ.
1,17,935 ಪುರುಷ ಮತದಾರರಲ್ಲಿ 90,922 ಪುರುಷರು ಮತ ಚಲಾಯಿಸಿದ್ದಾರೆ. 1,18,438 ಮಹಿಳಾ ಮತದಾರರಲ್ಲಿ 89,252 ಮಹಿಳೆಯರು ಮತದಾನ ಮಾಡಿದ್ದಾರೆ ಮತ್ತು 29 ಇತರೆ ಮತದಾರರ ಪೈಕಿ 12 ಮಂದಿ ಮತದಾನ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು