5:24 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ಸಂಡೂರು ವಿಧಾನಸಭೆ ಉಪ ಚುನಾವಣೆ: ಶೇ.76.24ರಷ್ಟು ಮತದಾನ

13/11/2024, 22:01

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರು ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ, ಸಂಡೂರು ಕ್ಷೇತ್ರ ವ್ಯಾಪ್ತಿಯ 253 ಮತಗಟ್ಟೆಗಳಲ್ಲಿ ನ.13ರಂದು ಬುಧವಾರದಂದು ಸುಸೂತ್ರ ಹಾಗೂ ಶಾಂತಿಯುತ ಮತದಾನ ನಡೆದಿದ್ದು, ಒಟ್ಟು ಶೇ.76.24 ರಷ್ಟು ಮತದಾನ ಪ್ರಮಾಣವಾಗಿದೆ.
ಚುನಾವಣಾ ಆಯೋಗದ ನಿಯಮದಂತೆ ಮತದಾನ ಪ್ರಕ್ರಿಯೆಯು ಬೆಳಿಗ್ಗೆ 7 ಗಂಟೆಗೆ ಪ್ರಾರಂಭಗೊಂಡಿತು. ನಿಧಾನಗತಿಯಿಂದ ಆರಂಭಗೊಂಡು ಸಂಜೆ ಹೊತ್ತಿಗೆ ಬಿರುಸು ಪಡೆಯಿತು. ಎಲ್ಲಾ ಮತಗಟ್ಟೆಗಳಲ್ಲಿ ಮತದಾರರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದು ಕಂಡುಬಂದಿತು.

ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇ.09.07ರಷ್ಟು, 11 ಗಂಟೆವರೆಗೆ ಶೇ.26.96ರಷ್ಟು, ಮಧ್ಯಾಹ್ನ 1 ಗಂಟೆವರೆಗೆ ಶೇ.43.46ರಷ್ಟು, ಮಧ್ಯಾಹ್ನ 3 ಗಂಟೆವರೆಗೆ ಶೇ.58.10ರಷ್ಟು, ಸಂಜೆ 5 ಗಂಟೆವರೆಗೆ 71.47ರಷ್ಟು ಹಾಗೂ ಮತದಾನ ಅವಧಿ ಮುಕ್ತಾಯ ನಂತರ ಅಂತಿಮವಾಗಿ ಶೇ.76.24ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ.
*ಮತದಾನ ವಿವರ:* ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,402 ಮತದಾರರಿದ್ದು, ಅದರಲ್ಲಿ 1,80,189 ಮತದಾರರು ತಮ್ಮ ಮತದ ಹಕ್ಕನ್ನು ಚಲಾಯಿಸಿದ್ದಾರೆ.
1,17,935 ಪುರುಷ ಮತದಾರರಲ್ಲಿ 90,922 ಪುರುಷರು ಮತ ಚಲಾಯಿಸಿದ್ದಾರೆ. 1,18,438 ಮಹಿಳಾ ಮತದಾರರಲ್ಲಿ 89,252 ಮಹಿಳೆಯರು ಮತದಾನ ಮಾಡಿದ್ದಾರೆ ಮತ್ತು 29 ಇತರೆ ಮತದಾರರ ಪೈಕಿ 12 ಮಂದಿ ಮತದಾನ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು