3:57 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಂಡೂರು ವಿಧಾನಸಭೆ ಉಪ ಚುನಾವಣೆ: ನಾಳೆ ಮತ ಎಣಿಕೆಗೆ ಸಕಲ ಸಿದ್ಧತೆ

22/11/2024, 17:51

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರು ವಿಧಾನಸಭೆ ಉಪ ಚುನಾವಣೆ ಮತ ಎಣಿಕೆ ಕಾರ್ಯವು ನವೆಂಬರ್‌ 23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು,ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ. ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನ.23 ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆೆ. ಇದಕ್ಕೂ ಮುನ್ನ 7 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಎಣಿಕೆ ಮತ್ತು ಇಟಿಪಿಬಿಎಸ್-4 ಮತ ಎಣಿಕೆ ಕಾರ್ಯ ನಡೆಯಲಿದೆ’ ಎಂದು ತಿಳಿಸಿದರು.
‘ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು 14+1 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ’ ಎಂದರು.
19 ಎಣಿಕಾ ಮೇಲ್ವಿಚಾರಕರು, 21 ಎಣಿಕಾ ಸಹಾಯಕರು ಮತ್ತು 20 ಎಣಿಕಾ ಸೂಕ್ಷ್ಮ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಹೇಳಿದರು.
ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿವೆ. ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ತಿಳಿಸಲು ಮಾಧ್ಯಮ ಕೇಂದ್ರ ತೆರೆಯಲಾಗುವುದು ಎಂದರು.
ಮತ ಎಣಿಕೆ ಕೇಂದ್ರದ 100 ಮೀಟರ್ ಪ್ರದೇಶದಲ್ಲಿ ವಾಹನಗಳ ನಿರ್ಬಂಧಿಸಲಾಗಿದೆ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮತ ಎಣಿಕೆ ಕೇಂದ್ರವಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಸಿಆರ್‌ಪಿಎಫ್, ಸಿಎಎಸ್‌ಎಫ್, ಕೆಎಸ್‌ಆರ್‌ಪಿ ಮತ್ತು ಸಿವಿಲ್ ಪೊಲೀಸ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತದಾನಕ್ಕೆ ಕೈಗೊಂಡಿರುವ ಸಿದ್ಧತೆಗಳನ್ನು ಚುನಾವಣಾಧಿಕಾರಿಯೂ ಆದ ಸಹಾಯಕ ಆಯುಕ್ತ ರಾಜೇಶ್‌ ಎಚ್‌.ಡಿ ಅವರು ಪರಿಶೀಲನೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು