5:31 AM Tuesday3 - December 2024
ಬ್ರೇಕಿಂಗ್ ನ್ಯೂಸ್
ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ… ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ… ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು… ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಅರಣ್ಯ ಒತ್ತುವರಿ: ರೈತ ಸಂಘದಿಂದ ಆರೋಪ;… ನನ್ನ ವಿರುದ್ಧ ಏನೇ ದಾಖಲೆಗಳಿದ್ದರೂ ಯತ್ನಾಳ್ ಬಿಡುಗಡೆ ಮಾಡಲಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

ಇತ್ತೀಚಿನ ಸುದ್ದಿ

ಸಂಡೂರು ವಿಧಾನಸಭೆ ಉಪ ಚುನಾವಣೆ: ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅಂತಿಮ ಸಿದ್ದತೆ

12/11/2024, 19:22

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಅಂತಿಮ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ನ.13 ರಂದು ಬೆಳಿಗ್ಗೆ 5.30 ಗಂಟೆಗೆ ರಾಜಕೀಯ ಪಕ್ಷಗಳ ಮುಖಂಡರ ಸಮಕ್ಷಮದಲ್ಲಿ ಅಣಕು ಮತದಾನ ನಡೆಯಲಿದೆ. ನಂತರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡು ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು 2,36,402 ಮತದಾರರಿದ್ದಾರೆ. 1,17,935 ಪುರುಷ ಮತದಾರರು, 1,18,438 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು 253 ಮತಗಟ್ಟೆ ಗಳಿವೆ ಎಂದು ಮಾಹಿತಿ ನೀಡಿದರು..
ನಗರ ವ್ಯಾಪ್ತಿಯಲ್ಲಿ 68 ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ 185 ಮತದಾನ ಕೇಂದ್ರಗಳಿವೆ. ಸಂಡೂರು 17, ತೋರಣಗಲ್ಲು 27 ಮತ್ತು ಚೋರನೂರು 16 ಮತಗಟ್ಟೆ ಸೇರಿ ಒಟ್ಟು 60 ಮತಗಟ್ಟೆ ಗಳನ್ನು ಕ್ರಿಟಿಕಲ್ ಮತಗಟ್ಟೆ ಕೇಂದ್ರಗಳೆಂದು ಗುರುತಿಸಲಾಗಿದೆ ಎಂದರು.  
ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಸಂಡೂರು ವಿಧಾನಸಭೆ ಉಪಚುನಾವಣೆಗೆ 324 ಬ್ಯಾಲೆಟ್ ಯುನಿಟ್, 324 ಕಂಟ್ರೋಲ್ ಯುನಿಟ್ ಮತ್ತು 379 ವಿವಿಪ್ಯಾಟ್ ಮತಯಂತ್ರಗಳನ್ನು ಬಳಸಲಾಗುವುದು. ಹೆಚ್ಚುವರಿಯಾಗಿ 304 ಬ್ಯಾಲೆಟ್ ಯುನಿಟ್, 304 ಕಂಟ್ರೋಲ್ ಯುನಿಟ್ ಮತ್ತು 329 ವಿವಿಪ್ಯಾಟ್ ಮತಯಂತ್ರಗಳು ಇರಿಸಲಾಗಿದೆ ಎಂದರು.
ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಅವರು ಮಾತನಾಡಿ, ಸಂಡೂರು ವಿಧಾನಸಭೆ ಕ್ಷೇತ್ರ ಶಾಂತಿಯುತವಾಗಿ ಚುನಾವಣೆ ನಡೆಸಲು ಅಗತ್ಯ ಬಂದೋಬಸ್ತ್ ಮಾಡಲಾಗಿದೆ. ಸುಮಾರು 1036 ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ನುಡಿದರು.
*ಪೊಲೀಸ್ ಸಿಬ್ಬಂದಿ ವ್ಯವಸ್ಥೆ:*
ಸಿವಿಲ್ ಪೊಲೀಸ್-676, ಡಿವೈಎಸ್ಪಿ 3, ಪಿಐ 6, ಪಿಎಸ್ಐ 14, ಎಎಸ್ಐ 22, ಹೆಚ್ ಸಿ 190, ಕಾನ್ಸ್ ಟೇಬಲ್ 281, ಗೃಹರಕ್ಷಕ ದಳ 160, ಕೆಎಸ್ಆರ್ಪಿ 360 ಅಧಿಕಾರಿ ಮತ್ತು ಸಿಬ್ಬಂದಿ ಸೇರಿ ಒಟ್ಟು 1036 ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ ಅನಿಲ್ ಕುಮಾರ್, ತಾಪಂ ಇಓ ಷಡಕ್ಷರಯ್ಯ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು