ಇತ್ತೀಚಿನ ಸುದ್ದಿ
ಸಂಘನಿಕೇತನ ಬಳಿ ನಿರ್ಮಿಸಲಾದ ನೂತನ ಸಂಘ ಕಾರ್ಯಾಲಯಕ್ಕೆ ಆರೆಸ್ಸೆಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಭೇಟಿ
08/12/2024, 22:39
ಮಂಗಳೂರು(reporterkarnataka.com): ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರು ನಗರದ ಮಣ್ಣಗುಡ್ಡೆಯ ಸಂಘನಿಕೇತನದ ಬಳಿ ನಿರ್ಮಿಸಲಾದ ನೂತನ ಸಂಘ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಾಲಯದ ಆವರಣದಲ್ಲಿ ಸ್ವರ್ಣಚಂಪಕ ಗಿಡವೊಂದನ್ನು ನೆಟ್ಟರು. ಈ ಸಂದರ್ಭದಲ್ಲಿ ಸಹ ಸರಕಾರ್ಯವಾಹ ಮುಕುಂದ ಸಿ.ಆರ್, ಕ್ಷೇತ್ರೀಯ ಸಂಘಚಾಲಕ ಡಾ. ಪಿ. ವಾಮನ್ ಶೆಣೈ, ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ, ಪ್ರಾಂತ ಸಂಘಚಾಲಕ ಜಿ ಎಸ್ ಉಮಾಪತಿ, ಮಂಗಳೂರು ವಿಭಾಗ ಸಂಘಚಾಲಕ ಡಾ. ನಾರಾಯಣ ಶೆಣೈ ಉಪಸ್ಥಿತರಿದ್ದರು.