ಇತ್ತೀಚಿನ ಸುದ್ದಿ
ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರ
24/02/2022, 21:03
ಮಂಗಳೂರು(reporterkarnataka.com): ಸ್ವಚ್ಛ ಭಾರತ ಮಿಷನ್ ವತಿಯಿಂದ ಸಾಹಸ್ ಸಂಸ್ಥೆ ಬೆಂಗಳೂರು ಮತ್ತು ಸಂಜೀವಿನಿ, KSRLPS(NRLM) ಸಹಯೋಗದೊಂದಿಗೆ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ
ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರ ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಉದ್ಘಾಟಿಸಿದರು. ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾ) ಇದರ ನೋಡಲ್ ಅಧಿಕಾರಿಯವರು, ಸಹಾಯಕ ಯೋಜನಾ ಅಧಿಕಾರಿಗಳು, ಮಂಗಳೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ತೋಟಗಾರಿಕೆ ಇಲಾಖೆಯ ಹಿರಿಯ ಉಪ ನಿರ್ದೇಶಕರು , ಸಾಹಸ್ ಸಂಸ್ಥೆಯ ಅಧಿಕಾರಿಗಳು, ಸಂಜೀವಿನಿ (NRLM) ವಿಭಾಗದ ವ್ಯವಸ್ಥಾಪಕರು, ಸ್ವಚ್ಛ ಭಾರತ್ ಮಿಷನ್(ಗ್ರಾ) ಸಮಾಲೋಚಕರು, 35 ಗ್ರಾಮ ಪಂಚಾಯತ್ ಗಳ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.