9:49 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿರುವ ಅಭಿನಂದನಾ ಶಿಕ್ಷಣ ಸಂಸ್ಥೆಗೆ ಗಚ್ಚಿನ ಹಿರೇಮಠದ ವರ ರುದ್ರಮುನಿ ಶಿವಾಚಾರ್ಯರ ಮೆಚ್ಚಿಗೆ

01/06/2021, 17:30

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಕೋವಿಡ್ ಸಮಯದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ಮುಂದಾಗಿರುವ ಅಭಿನಂದನ್ ಶಿಕ್ಷಣ ಸಂಸ್ಥೆಗೆ ಮಸ್ಕಿ ವರ ರುದ್ರಮುನಿ ಶಿವಾಚಾರ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಇಂಥ ಕೆಲಸ ಮಾಡುವುದು ಪುಣ್ಯದ ಕೆಲಸ ವೆಂದು ಹೇಳಿದ ಸ್ವಾಮೀಜಿ, ಜನರ ಹಸಿವನ್ನು ನೀಗಿಸುವ ಹಾದಿಯಲ್ಲಿ ಅಭಿನಂದನ್ ಸಂಸ್ಥೆಯ ರಾಮಣ್ಣ ಹಂಪರಗುಂದಿ ವಿನೂತನ ಹೆಜ್ಜೆ ಇಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಮಸ್ಕಿ ಪಟ್ಟಣದಲ್ಲಿ ಕೋವಿಡ್ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಮಸ್ಕಿ ಪಟ್ಟಣದ 9 ಮತ್ತು 16 ನೇ ವಾರ್ಡಿನಲ್ಲಿ ಭಾನುವಾರದಂದು 60 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ನಾಗರಾಜ ಶೆಟ್ಟಿ, ಅಭಿನಂದನ್ ಸಂಸ್ಥೆಯು ಬಡ ಕುಟುಂಬಗಳಿಗೆ ಆಹಾರವನ್ನು ಒದಗಿಸುವುದರ ಜೊತೆಗೆ ಔಷಧಗಳನ್ನು ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾರ್ವಜನಿಕರಲ್ಲಿ ಧೈರ್ಯ ತುಂಬುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.  

ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದೆ ಎಂದು ನಾಗರಾಜ ಶೆಟ್ಟಿ ಹೇಳಿದರು. 

ಇದೇ ಸಂದರ್ಭದಲ್ಲಿ  ಸಿದ್ದಪ್ಪ ಹಳ್ಳಿ, ಶಿಕ್ಷಕರಾದ ಕಳಕಪ್ಪ ಹಾದಿಮನಿ, ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಶೃತಿ ಹಂಪರಗುಂದಿ, ರೇಣುಕಾ ಹಂಪರಗುಂದಿ, ಬಸವರಾಜ್ ಸ್ವಾಮಿ, ರವಿಕುಮಾರ್ ಸ್ಥಾವರಮಠ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಕಾರ್ತಿಕ್ ಜೋಗೀನ್, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು