1:54 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಸಂಕಷ್ಟದ ಪರಿಸ್ಥಿತಿಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸಲು ಯತ್ನಿಸುತ್ತಿದೆ: ಶಾಸಕ ಕಾಮತ್

21/05/2021, 20:11

ಮಂಗಳೂರು(reporterkarnataka news): ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಆದರೆ ಜನರು ಬುದ್ಧಿವಂತರಾಗಿದ್ದಾರೆ. ಕಾಂಗ್ರೆಸಿನ ನೀಚ ರಾಜಕಾರಣವನ್ನು ಜನತೆ ಸರಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. 

ದೇಶವು ಕೋವಿಡ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ನೀಡಿರುವ ಟೂಲ್ ಕಿಟ್ ಒಂದು ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ ದೇಶದ ಹಿತವನ್ನು ಬಲಿಗೊಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಕಳೆದ ೭೦ ವರ್ಷಗಳ ಕಾಲ ಜನರನ್ನು ವಂಚಿಸಿ ಆಡಳಿತಕ್ಕೆ ಬಂದ ಕಾಂಗ್ರೆಸ್ ತನ್ನ ಹಳೆ ಚಾಳಿಯನ್ನು ಬಿಟ್ಟಿಲ್ಲ ಎಂದು ಕಿಡಿಕಾರಿದ್ದಾರೆ. 

ದೇಶ ಸಂಕಟದಲ್ಲಿರುವ ಸಂದರ್ಭವನ್ನು ಉಪಯೋಗಿಸಿಕೊಂಡು ಬಿಜೆಪಿ ವಿರೋಧಿ ಅಲೆ ಹುಟ್ಟಿಸುವುದಕ್ಕಾಗಿ ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜಿಗಿಡಲು ಸ್ಥಳೀಯ ಬುದ್ಧಿಜೀವಿಗಳನ್ನು, ಸಾಮಾಜಿಕ ಜಾಲತಾಣಗಳನ್ನು, ಜಾಗತಿಕ ಮಟ್ಟದಲ್ಲಿ ಕೆಲವೊಂದು ಮಾಧ್ಯಮಗಳ ಮೂಲಕ ಸುಳ್ಳು ಸುದ್ಧಿಗಳನ್ನು ಬಿತ್ತರಿಸಿ ಜನರಲ್ಲಿ ಭೀತಿ ಹುಟ್ಟಿಸಲು ಕಾಂಗ್ರೆಸ್ ಪ್ರಯತ್ನಿಸಿದೆ. ಅದಕ್ಕಾಗಿ ಬೆಡ್ ಬ್ಲಾಕಿಂಗ್ ಮಾಡಿಸುವಂತೆ ಟೂಲ್ ಕಿಟ್‌ನಲ್ಲಿ ಉಲ್ಲೇಖಿಸಿರುವುದು ಕಾಂಗ್ರೆಸಿನ ನೀಚ ರಾಜಕೀಯದ ಭಾಗವಾಗಿದೆ. ಕಾಂಗ್ರೆಸಿನ ಈ ಪ್ರಮಾಣವನ್ನು ದೇಶ ಎಂದೆಂದಿಗೂ ಕ್ಷಮಿಸುವುದಿಲ್ಲ ಎಂದು ಶಾಸಕ ಕಾಮತ್ ಹೇಳಿದ್ದಾರೆ.

೧೦೦ ಕೋಟಿ ರೂ. ಸರಕಾರಕ್ಕೆ ನೀಡುತ್ತೇವೆ ಎಂದಿರುವುದು ಕಾಂಗ್ರೆಸಿನ ಸ್ವಂತ ಹಣವಲ್ಲ: 

ಕೋವಿಡ್ ನಿಯಂತ್ರಣಕ್ಕಾಗಿ ೧೦೦ ಕೋಟಿ ರೂ. ನೀಡುವುದಾಗಿ ಕಾಂಗ್ರೆಸ್ ಘೋಷಿಸಿರುವುದು ಅವರ ಪಕ್ಷದ ಹಣವನ್ನಲ್ಲ. ಶಾಸಕರಿಗೆ, ಸಂಸದರಿಗೆ ನೀಡುವ ಅನುದಾನವನ್ನು ಸ್ವತಃ ಪಕ್ಷದ ವತಿಯಿಂದ ಕೊಡುತ್ತಿರುವಂತೆ ಅಗ್ಗದ ಪ್ರಚಾರ ಪಡೆಯುತಿದ್ದಾರೆ. ಈಗಾಗಲೇ ಬಿಜೆಪಿಯ ಶಾಸಕರು ಸಂಸದರು ತಮ್ಮ ಅನುದಾನವನ್ನು ಕೋವಿಡ್ ನಿಯಂತ್ರಣಕ್ಕಾಗಿ ಬಳಸಿಕೊಳ್ಳಲು ತಿಳಿಸಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡರು ತಮ್ಮ ವೈಯಕ್ತಿಕ ಹಣ ನೀಡಿದಂತೆ ಡಂಗೂರ ಸಾರುತಿದ್ದಾರೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು