1:09 AM Saturday6 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಜನರ ಬೆನ್ನಿಗೆ ನಿಲ್ಲುವುದೇ ಕಾಂಗ್ರೆಸ್ ಸರಕಾರ: ನಂಜನಗೂಡು ಪ್ರವಾಹಪೀಡಿತ ಕುಟುಂಬಗಳಿಗೆ ಸಚಿವ ಮಹದೇವಪ್ಪ ಆತ್ಮಸ್ಥೈರ್ಯ

03/08/2024, 19:24

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿಯಲ್ಲಿ ಭಾರಿ ಪ್ರವಾಹ ಬಂದು ಜಲಾವೃತವಾದ ತಗ್ಗು ಪ್ರದೇಶದ ಬಡಾವಣೆಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣಸಚಿವ ಎಚ್. ಸಿ. ಮಹದೇವಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇರಳದ ವಯನಾಡಿನಲ್ಲಿ ಸುರಿದ ಧಾರಾಕಾರ ಮಳೆಯ ಹಿನ್ನೆಲೆ ರಾಜ್ಯದ ಕಬಿನಿ ಜಲಾಶಯದಲ್ಲಿ ಭಾರಿ ಪ್ರಮಾಣದ ಒಳಹರಿವಿನ ಪ್ರಮಾಣ ಹೆಚ್ಚಾದ ಕಾರಣ ನಂಜನಗೂಡಿನ ಕಪಿಲಾ ನದಿಯ ಮೂಲಕ ಸುಮಾರು 70000ಕ್ಕೂ ಅಧಿಕ ಕ್ಯೂಸೆಕ್ಸ್ ನೀರನ್ನು ಹೊರ ಬಿಟ್ಟ ಹಿನ್ನೆಲೆ ನಂಜನಗೂಡಿನ ಕಪಿಲಾ ನದಿಯಲ್ಲಿ ಭಾರಿ ಪ್ರಮಾಣದ ಪ್ರವಾಹದ ನೀರು ಹರಿದು ಬಂದ ಕಾರಣ ತಗ್ಗು ಪ್ರದೇಶದ ಬಡಾವಣೆಗಳಿಗೆ ಪ್ರವಾಹದ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿತು.


ನಂಜನಗೂಡು ಪಟ್ಟಣದ ತೋಪಿನ ಬೀದಿ ಹಳ್ಳದ ಕೇರಿ ಹಾಗೂ
ಬೊಕ್ಕಹಳ್ಳಿ , ಗ್ರಾಮಗಳ ವಾಸದ ಮನೆಗಳಿಗೆ ಪ್ರವಾಹದ ನೀರು ನುಗ್ಗಿ ಸಾಕಷ್ಟು ಹಾನಿಯಾಗಿತ್ತು ಕೃಷಿ ಭೂಮಿಗಳಲ್ಲಿ ಮಾಡಿದ ಬೇಳೆ ನಾಶವಾಗಿ ಸಾಕಷ್ಟು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ನಮ್ಮಜಿಲ್ಲಾಡಳಿತ ಎಚ್ಚೆತ್ತು ಏಳು ಕಡೆ ಗಂಜಿ ಕೇಂದ್ರಗಳನ್ನು ತೆರೆದು 250ಕ್ಕೂ ಹೆಚ್ಚು ಕುಟುಂಬಗಳನ್ನು ಕಾಳಜಿ ಕೇಂದ್ರಗಳಲ್ಲಿ ಬಿಟ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಸಿ. ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನಂಜನಗೂಡು ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಬೊಕ್ಕಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸ್ನೂರು, ಸಿಇಒ ಗಾಯತ್ರಿ ಈಒ ಜೆರಾಲ್ಡ್ ರಾಜೇಶ್ ಸೇರಿದಂತೆ ಸಾಕಷ್ಟು ಅಧಿಕಾರಿಗಳ ತಂಡವು ಸ್ಥಳದಲ್ಲಿ ಹಾಜರಿದ್ದು ನೊಂದ ಕುಟುಂಬಗಳ ಸಂಕ್ಷಿಪ್ತ ಮಾಹಿತಿಯನ್ನು ಸಚಿವರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಕೂಡಲೇ ಸರ್ಕಾರದಿಂದ ನೊಂದ ಕುಟುಂಬಗಳಿಗೆ ಪರಿಹಾರದ ಹಣ ನೀಡಲಾಗುವುದು. ವಾಸದ ಮನೆಗಳ ನಿರ್ಮಾಣಕ್ಕೆ ಸ್ಥಳಾಂತರಕ್ಕೆ ಈಗಾಗಲೇ ಎಲ್ಲಾ ತಯಾರಿ ನಡೆಸಲಾಗಿದೆ. ಯಾವುದೇ ಕಾರಣಕ್ಕೂ ಸಂತ್ರಸ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ ಈ ಸಂದರ್ಭದಲ್ಲಿ ನೋಂದವರಿಗೆ ಆತ್ಮಸ್ಥೈರ್ಯ ತುಂಬಿದರು.
ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ಈಗಾಗಲೇ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪ ಜಿಲ್ಲಾಧಿಕಾರಿಗಳ ಸಮೇತ ಅಧಿಕಾರಿಗಳ ತಂಡವೇ ಇಲ್ಲಿಗೆ ಬಂದು ಪರಿಶೀಲನೆ ನಡೆಸಿದೆ. ತಗ್ಗು ಪ್ರದೇಶಗಳಿಗೆ ಶಾಶ್ವತ ಪರಿಹಾರ ನೀಡಲು ಈಗ ತಯಾರಿ ನಡೆಸಲಾಗಿದೆ. ಅದಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬದ್ಧವಾಗಿದೆ ಎಂದರು.
ಇದೇ ಸಂದರ್ಭ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್ ನೂರು ಮಂದಿ ಸಂತ್ರಸ್ತರಿಗೆ ಉತ್ತಮ ಗುಣಮಟ್ಟದ ಹೊದಿಕೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು