9:56 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಸಂಕ್ರಮಣ ಪೂಜೆ ಮುಗಿಸಿ ಹೊರ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿ; ಅದೃಷ್ಟವಶಾತ್ ಶಾಸಕರು ಪಾರು

14/01/2024, 19:26

ಬಂಟ್ವಾಳ(reporterkarnataka.com): ಸಂಕ್ರಮಣ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಗೆ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಇಂದು ಮಧ್ಯಾಹ್ನ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಾರಿಯಾಗಿದ್ದು, ಅದೃಷ್ಟವಶಾತ್ ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ಶಾಸಕ ರಾಜೇಶ್ ನಾಯ್ಕ್ ಅವರು ನಡೆದುಕೊಂಡು ಬರುತ್ತಿರುವ ವೇಳೆ ಕಾರು ಡಿಕ್ಕಿ ಹೊಡೆದಿದೆ.
ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು
ಡಿಕ್ಕಿ ಹೊಡೆದು ಪರಾರಿಯಾಗಿದೆ. ಕಾರು ಡಿಕ್ಕಿ ಹೊಡೆದು ನೆಲಕ್ಕುರುಳಿದ ಶಾಸಕರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಪಡೆದ ಬಳಿಕ ಅವರು ಮನೆಗೆ ವಾಪಸ್ ಬಂದಿದ್ದಾರೆ.
ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸ್ಥಳೀಯರು ಗುರುಪುರದಲ್ಲಿ ತಡೆ ಹಿಡಿದಿದ್ದಾರೆ. ಚಾಲಕ ಸಹಿತ ಕಾರನ್ನು ಬಜಪೆ ಪೋಲೀಸರಿಗೆ ಒಪ್ಪಿಸಿಸಲಾಗಿದೆ. ಕಾರು ಚಾಲಕನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು