11:55 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ…

ಇತ್ತೀಚಿನ ಸುದ್ದಿ

ಸಂತರ ಅವಹೇಳನ; ಮಾಜಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಲಿ: ಶಾಸಕ ವೇದವ್ಯಾಸ ಕಾಮತ್ 

25/03/2022, 19:32

ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಸಂತರ ಬಗ್ಗೆ ಕೇವಲವಾಗಿ ಮಾತನಾಡಿ ಅವಹೇಳನ ಮಾಡಿದ್ದು, ತಕ್ಷಣ ಅವರು ಕ್ಷಮೆಯಾಚಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗಾಗಿ ಹಿಂದೂ ಸಂತರ ವಿರುದ್ಧ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ತನ್ನ ಸರಕಾರದ ಅವಧಿಯಲ್ಲಿ ಸಿದ್ಧರಾಮಯ್ಯ ಅವರು ಹಿಂದುಗಳಿಗೆ ಮಾಡಿದ ಅನ್ಯಾಯವನ್ನು ಹಿಂದೂ ಸಮಾಜ ಮರೆತಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಸಲ್ಮಾನ ವಿಧ್ಯಾರ್ಥಿನಿಯರು ಬುರ್ಖಾ ಹಾಕಿಕೊಂಡರೆ ತಪ್ಪೇನು, ಹಿಂದೂ ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ ಎನ್ನುವ ಪ್ರಶ್ನೆ ಎತ್ತಿದ ಸಿದ್ಧರಾಮಯನವರಿಗೆ ಮರೆವಿನ ಕಾಯಿಲೆಯಿದೆಯೇ ? ಮುಸಲ್ಮಾನ ಮಹಿಳೆಯರಿಗೆ ಬುರ್ಖಾ ಹಾಕುವುದಕ್ಕೆ ವಿರೋಧವಲ್ಲ, ತರಗತಿಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಸಮವಸ್ತ್ರ ಪಾಲಿಸಬೇಕು ಎನ್ನುವುದು ನ್ಯಾಯಾಲಯವೂ ಹೇಳಿದೆ. ಒಬ್ಬ ಜನಪ್ರತಿನಿಧಿಯಾಗಿ ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸಿದ್ಧರಾಮಯ್ಯನವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಸಿದ್ಧರಾಮಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಹಿಂದೂ ಸಮುದಾಯದ ವಿರುದ್ಧ ಕಿಡಿ ಕಾರುತ್ತಲೇ ಇದ್ದರು. ಮಠ ಮಂದಿರಗಳಿಗೆ ಸಿದ್ಧರಾಮಯ್ಯ ಹಾಗೂ ಕಾಂಗ್ರೇಸ್ ಎಸಗಿದ ಅನಾಚಾರಗಳು ತಿಳಿದಿದೆ. ಸದ್ಯ ಮತ್ತದೇ ಕಾರ್ಯಕ್ಕೆ ಕೈ ಹಾಕಿ ಸಂತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಿದ್ಧರಾಮಯ್ಯ ಕ್ಷಮೆ ಕೇಳಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು