5:25 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಸ್ಯಾಂಟ್ರೊ ರವಿ ಆಸ್ತಿ ಮುಟ್ಟುಗೋಲು; ಸೂಕ್ತ ತನಿಖೆ: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

10/01/2023, 21:34

ಹುಬ್ಬಳ್ಳಿ(reporterkarnataka.com): ಸ್ಯಾಂಟ್ರೊ ರವಿಯ ಎಲ್ಲಾ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಆತನ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದೆ. ಈತನ ವಿಷಯದಲ್ಲಿ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿರುವವರ ಕಾಲದಲ್ಲೇ ಆತ ಅವ್ಯವಹಾರ ಮಾಡಿ ಜೈಲು ಸೇರಿ, ಬಿಡುಗಡೆ ಕೂಡ ಆಗಿದ್ದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ನಿವಾಸದಲ್ಲಿ ಮಂಗಳವಾರ ಮಾಧ್ಯಮ ಜತೆ ಮಾತನಾಡಿದ ಅವರು, ಈ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುವುದು ಬೇಡ. ಆತ ಯಾರು ಯಾರ ಜೊತೆಗೆ ನಂಟು ಹೊಂದಿದ್ದ, ಆತನ ಹಿನ್ನೆಲೆ ಏನು ಎಂಬ ಬಗ್ಗೆ ಹೆಚ್ಚು ಪ್ರಾಮುಖ್ಯತೆ ಕೊಡುವುದು ಸರಿಯಲ್ಲ. ಆ ಬಗ್ಗೆ ನಮ್ಮ ಪೊಲೀಸರು ವಿಚಾರಣೆ ಮಾಡುತ್ತಾರೆ. ಆತ ಯಾವ ಸರ್ಕಾರದಲ್ಲಿ ಏನೇನು ಅವ್ಯವಹಾರ ಮಾಡಿದ್ದ, ಯಾರ ಪಾತ್ರ ಎಷ್ಟಿದೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದರು.
ಉತ್ತರ ಕರ್ನಾಟಕದಲ್ಲಿ, ಅದರಲ್ಲೂ ಹುಬ್ಬಳ್ಳಿ -ಧಾರವಾಡದಲ್ಲಿ ಮೊದಲ ಬಾರಿಗೆ ನಡೆಯಲಿರುವ ಯುವ ಮಹೋತ್ಸವಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.

ಐದು ದಿನಗಳ ಕಾಲ ಯುವ ಜನೋತ್ಸವದಲ್ಲಿ ಕಲೆ, ಸಾಹಿತ್ಯ, ಸಂಗೀತಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಪಂಚಮಸಾಲಿ ಸಮಾಜ ಮೀಸಲಾತಿ ಬೇಡ ಎಂದು ತಕಾರರು ತೆಗೆದ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಒಕ್ಕಲಿಗ ಅಥವಾ ಪಂಚಮಸಾಲಿ ಸಮಾಜ ಏನು ಕೇಳಿದೆ ಎಂಬುದು ನನ್ನ ಗಮನ ಬಂದಿದೆ. ಇನ್ನು ಏನು ಮೀಸಲಾತಿ ಕೊಡಬೇಕು ಅದನ್ನು ಕಾನೂನು ಚೌಕಟ್ಟಿನಲ್ಲಿ ಕೊಡುತ್ತೇವೆ. ಶಾಶ್ವತವಾದ ಮೀಸಲಾತಿ ಕೊಡುವ ಕುರಿತು ಸಹ ಚಿಂತನೆ ನಡೆದಿದೆ. ಏನೇ ಮಾಡಲು ಹಿಂದುಳಿದ ವರ್ಗಗಳ ಆಯೋಗದ ಪೂರ್ಣ ವರದಿ ಬರಬೇಕು. ಬೇಗ ನೀಡುವಂತೆ ಆಯೋಗವನ್ನು ಕೋರಲಾಗಿದೆ ಎಂದು ಪ್ರತಿಕ್ರಿಯಿಸಿದರು.

ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿರ್ಧರಿಸಿರುವುದು ಅವರ ವೈಯಕ್ತಿಕ ನಿರ್ಧಾರ.‌ ಅವರನ್ನು ಗೆಲ್ಲಿಸುವುದು ಬಿಡುವುದು, ಅಲ್ಲಿನ ಜನರಿಗೆ ಬಿಟ್ಟಿದ್ದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು