ಇತ್ತೀಚಿನ ಸುದ್ದಿ
ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷೆಗೊಳಗಾಗುವ ಪರಿಸ್ಥಿತಿ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ: ಗೃಹ ಸಚಿವ ಅರಗ ಜ್ಞಾನೇಂದ್ರ
16/01/2023, 16:54
ಬೆಂಗಳೂರು(reporterkarnataka.com): ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭಾವುಕರಾಗಿ ಹೇಳಿದರು.
ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ, ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸಮಾಜ ದ್ರೋಹಿಗಳೂ, ಸಮಾಜ ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ, ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಅವರು, ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮ ಪಾರದರ್ಶಕವಾಗಿವೆ ಎಂದರು.














