1:20 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಸಂವಿಧಾನ ದ್ವೇಷಿಸುವ ಆರೆಸ್ಸೆಸ್ ಸಿದ್ಧಾಂತವನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

21/01/2025, 19:23

*BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ*

*ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ: ಸಿಎಂ*

*BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ: ಸಿ.ಎಂ ಘೋಷಣೆ*

*ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ: ಸಿ.ಎಂ ವಿಶ್ಲೇಷಣೆ*

*ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು: ಸಿಎಂ*

ಬೆಳಗಾವಿ(reporterkarnataka.com): ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದರು.
ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದು ಅವರು ನುಡಿದರು.
ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ.
BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದು ಅವರು ಹೇಳಿದರು.
ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ.
ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು ಎಂದರು.
ಗಾಂಧಿ, ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು