11:28 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸರಕಾರ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ರಾಜ್ಯಾಧ್ಯಕ್ಷ ಅಶ್ವಥ ಟಿ. ಮರಿಗೌಡ

04/08/2024, 19:19

ಶಿವು ರಾಠೋಡ ರಾಯಚೂರು

info.reporterkarnataka@gmail.com

ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು – ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳ ಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ – ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡನಿಂದ ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದೂ ಇದನ್ನು ನಿಲ್ಲಿಸುವಂತೆ ಕಾರ್ಮಿಕ ಸಚಿವರಿಗೆ ಎಚ್ಚರಿಸಿದರು.
ತಾಲೂಕ ಅಧ್ಯಕ್ಷರನ್ನಾಗಿ ತಿಮಪ್ಪ. ಉಪಾಧ್ಯಕ್ಷರು ಈರಣ್ಣ. ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ. ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್,ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು