6:47 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಸರಕಾರದ ಆದೇಶ ತುಳುನಾಡಿನ ಜನತೆಯ ಹೋರಾಟದ ಫಲ; ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ: ಮುನೀರ್ ಕಾಟಿಪಳ್ಳ

14/11/2022, 22:04

ಸುರತ್ಕಲ್ (reporterkarnataka.com): ಸುಮಾರು 6 ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದ‌ಕ್ಷಿಣ ಕ‌ನ್ನಡ, ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಒಗ್ಗಟ್ಟಿನ ಹೋರಾಟದ ಫಲ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.

ಜನತೆಯ ಅಖಂಡ ಬೆಂಬಲದೊಂದಿಗೆ ಹೋರಾಟ ಸಮಿತಿ ಕಳೆದ ಮೂರು ತಿಂಗಳಿಂದ ನಿರ್ಣಾಯಕ ಹೋರಾಟಗಳನ್ನು ಸಂಘಟಿಸಿತ್ತು. ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ. ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೆ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ,ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ದವಾಗಿ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈಸಂದರ್ಭ ಕನಿಷ್ಟ ವಿಷಾಧವನ್ನಾದರು ವ್ಯಕ್ತಪಡಿಸಬೇಕು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು