3:58 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಸರಕಾರದ ಅನುದಾನ ಇಲ್ಲದೆ ಊರವರ ಸಹಕಾರದಿಂದ ಉತ್ತಮ ಶಾಲೆ ನಿರ್ಮಿಸಬಹುದು: ಶಾಸಕ ಅಶೋಕ್ ರೈ

08/06/2024, 20:28

ಪುತ್ತೂರು(reporterkarnataka.com): ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯನ್ನೂ ಕಲಿಸುವುದರಿಂದ ಮಕ್ಕಳ ಬುದ್ಧಿವಂತಿಕೆ ಹೆಚ್ಚಾಗುತ್ತದೆ. ಶಾಲೆಗಳಿಗೆ ಶಿಕ್ಷಕರನ್ನು ಒದಗಿಸುವ ಕೆಲಸ ಸರಕಾರದಿಂದ ಆಗಬೇಕಾಗಿದೆ. ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದ ಅನುದಾನವನ್ನು ಕಾಯದೆ ಊರವರ ಸಹಕಾರದಿಂದ ಉತ್ತಮ ಶಾಲೆಗಳನ್ನು ನಿರ್ಮಿಸಬಹುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೆದಿಲ ಮತ್ತು ಅಕಾಡೆಮಿ ಆಫ್ ರೂರಲ್ ಎಜುಕೇಶನ್ ಕೆದಿಲ ಇದರ ವತಿಯಿಂದ ನಿರ್ಮಾಣವಾದ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾಜಿ ಶಾಸಕ, ಶಾಲೆಯ ಕಟ್ಟಡ ಸಮಿತಿ ಗೌರವಾಧ್ಯಕ್ಷ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಮಾತನಾಡಿ, ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳ ಭವಿಷ್ಯ ನಿರ್ಮಾಣ ಮಾಡುವಲ್ಲಿ ಊರವರ ಸಹಕಾರ ಅಗತ್ಯ ಎಂದು ಹೇಳಿದರು.
ವೇದಿಕೆಯಲ್ಲಿ ಅತಿಥಿಗಳಾಗಿ ಬಂಟ್ವಾಳ ಕ್ಷೇತ್ರ ಕ್ರೀಡಾ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್, ಕೆದಿಲ ಗ್ರಾಪಂ ಅಧ್ಯಕ್ಷ ಹರೀಶ ವಾಲ್ತಾಜೆ, ಕರ್ನಾಟಕ ಬ್ಯಾಂಕ್ ಪುತ್ತೂರು ಕ್ಲಸ್ಟರ್ ಮುಖ್ಯ ನಿರ್ವಾಹಕ ಶ್ರೀಹರಿ, ಸಮೂಹ ಸಂಪನ್ಮೂಲ ವ್ಯಕ್ತಿ ಸುಧಾಕರ ಭಟ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಮೇಶ್, ಕೆದಿಲ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಪೆರ್ನಾಜೆ, ವಿಶ್ರಾಂತ ಅಧ್ಯಾಪಕ, ದಾನಿ, ಕೆ.ಸುಬ್ರಾಯ ಭಟ್ ಶುಭಹಾರೈಸಿ ಮಾತನಾಡಿ, ಶಾಲೆಯ ಅಭಿವೃದ್ಧಿಕಾರ್ಯಗಳಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶಾಲೆಗೆ ನೀರಿನ ಸೌಕರ್ಯ ಒದಗಿಸಿದ ಕೇಶವ ಪ್ರಸಾದ್ ಕೆದಿಲ ಅವರನ್ನು ಸನ್ಮಾನಿಸಲಾಯಿತು.


ಅಕಾಡೆಮಿ ಆಫ್ ರೂರಲ್ ಎಜುಕೇಶನ್ ಟ್ರಸ್ಟ್ ನ ಸಂಚಾಲಕ ಚಂದ್ರಶೇಖರ ಭಟ್ ಕುಕ್ಕಜೆ ಸ್ವಾಗತಿಸಿ ಪ್ರಸ್ತಾವನೆಗೈದರು. ಟ್ರಸ್ಟ್ ನ ಕೋಶಾಧಿಕಾರಿ ಕೃಷ್ಣಮೂರ್ತಿ ವಂದಿಸಿದರು. ಶಾಲೆಯ ನೂತನ ಕಟ್ಟಡಕ್ಕೆ ಕೆದಿಲ ಶಾಲೆಯ ಕಟ್ಟಡ ಸಮಿತಿಯ ಅಧ್ಯಕ್ಷ ಕೆ. ಸುಬ್ರಾಯ ಭಟ್ ಅಂಡಿಪುಣಿ ರೂ. ಹದಿನೈದು ಲಕ್ಷ ಸಹಾಯ ಧನ ನೀಡಿದರು. ಪುಂಜತ್ತೋಡಿ ಭೀಮ ಭಟ್ಟರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡಿ ಕೊಡಲಾಗುವುದಾಗಿ ಕೃಷ್ಣ ಮೂರ್ತಿ ಕೆದಿಲ ಘೋಷಿಸಿದರು.
ಶಾಸಕರ ಅನುದಾನದಿಂದ ಶೌಚಾಲಯ ನಿರ್ಮಾಣಕ್ಕೆ ರೂ. ಐದು ಲಕ್ಷ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ದೀಪದಿಂದ ಓರ್ವ ಶಿಕ್ಷಕರ ನೇಮಕ ಮಾಡುವುದಾಗಿ ಘೋಷಿಸಿಸಲಾಯಿತು. ಕಟ್ಟಡ ಸಮಿತಿಯ ಉಪಾಧ್ಯಕ್ಷ ಮುರಳೀಧರ ಶೆಟ್ಟಿ, ಸುಬ್ಬಣ್ಣ ಭಟ್ ಬೀಡಿಗೆ ಉಪಸ್ಥಿತರಿದ್ದರು. ಕೇಶವ ಕೆದಿಲ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು