4:44 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ

21/09/2024, 23:00

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸರಕಾರದ ನಿಗಮ, ಮಂಡಳಿ, ಸಹಕಾರಿ ಬ್ಯಾಂಕ್, ಸರ್ಕಾರಿ ಹಾಸ್ಟಲ್, ಶಾಲೆ, ಕಾಲೇಜುಗಳಿಗೆ ನಾಮ‌ನಿರ್ದೇಶಿತ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಕಲ್ಲುಕಂಬ ಪಂಪಾಪತಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿ ಯಲ್ಲಿ ಮುಖ್ಯಮಂತ್ರಿ,ಉಪ‌ ಮುಖ್ಯಮಂತ್ರಿ ಮತ್ತು ಸಚಿವರಿಗೆ ಒತ್ತಾಯದ ಮನವಿ ಮಾಡಿದರು.
ರಾಜ್ಯದಲ್ಲಿ 482 ವಿವಿಧ ಸಮಿತಿಗಳಿವೆ. ಅವುಗಳಿಗೆ ತಲಾ ಐದರಂತೆ ನೇಮಕ ಮಾಡಿದರೆ. ರಾಜ್ಯದಲ್ಲಿ ಒಂದು ಲಕ್ಷ ಜನರಿಗೆ ಈ ಅವಕಾಶ ದೊರೆಯಲಿದೆ. ಇವರಿಗೆ ಸರ್ಕಾರದಿಂದ ಯಾವುದೇ ಗೌರವ ಧನ ಬೇಕಿಲ್ಲ. ಕೇವಲ ಗುರುತಿನ ಕಾರ್ಡು ನೀಡಿದರೆ ಸಾಕು ಎಂದಿದ್ದಾರೆ.
ಹೀಗೆ ನಾಮ‌ನಿರ್ದೇಶನ ಮಾಡುವಾಗ ಪರಿಶಿಷ್ಟರು, ಮಹಿಳೆಯರು, ಪದವೀಧರರು ಎಂದು ಮೀಸಲಾತಿ ಪರಿಗಣಿಸಬೇಕು. ಹೀಗೆ ಮಾಡಿದರೆ ಬಳ್ಳಾರಿ ಜಿಲ್ಲೆಯ 2,500 ಜನ ಪಕ್ಷದ ಕಾರ್ಯಕರ್ತರಿಗೆ ಅವಕಾಶ ದೊರೆಯಲಿದೆ ಎಂದರು.
ಪಕ್ಷಕ್ಕಾಗಿ ದುಡಿದವರಿಗೆ ಒಂದು ಸ್ಥಾನಮಾನ ಕಲ್ಪಿಸಲು ಇದು ಸದಾವಕಾಶ. ಸರ್ಕಾರ ಕೂಡಲೇ ನಾಮ‌ನಿರ್ದೇಶನ ಮಾಡಿ ಮುಗಿಸಬೇಕು ಎಂದು ಮನವಿ ಮಾಡಿದರು.
ಇನ್ನು ಕೆಲವು ಸಮುದಾಯಗಳಿಗೆ ಮಾತ್ರ ನಗರದಲ್ಲಿ ಸಭಾಂಗಣ ನಿರ್ಮಾಣಕ್ಕೆ ನಿವೇಶನ, ಸಭಾಂಗಣ ನಿರ್ಮಾಣ ಆಗಿದೆ. ಸಣ್ಣ ಸಮುದಾಯಗಳಿಗೆ ಆಗಿಲ್ಲ. ಅದಕ್ಕಾಗಿ ಒಂದೇ ಕಡೆ ಸಾಮೂಹಿಕ ವೇದಿಕೆ ಮಾಡಿ, ಅಲ್ಲಿ ಎಲ್ಲಾ ಸಮುದಾಯದ ಜನತೆಗೆ ನಿವೇಶನ ನೀಡಿ ಸಭಾಂಗಣಗಳನ್ನು ನಿರ್ಮಿಸಿ ಕೊಡಿ ಎಂದು ಸಹ ಅವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು