1:20 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಸರಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮವಾದ ಚಿಕಿತ್ಸೆ ದೊರೆಕಿಸುವುದಕ್ಕೆ ನನ್ನ ಪ್ರಥಮ ಆದ್ಯತೆ: ಸಚಿವ ಮುನಿರತ್ನ

16/08/2021, 09:30

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ : ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮವಾದ ಚಿಕಿತ್ಸೆ ದೊರೆಯುವಂತೆ ಮಾಡುವುದು ನನ್ನ ಪ್ರಥಮ ಆದ್ಯತೆಯಾಗಿದ್ದು , ಆಸ್ಪತ್ರೆಗಳಲ್ಲಿ ಅವಶ್ಯಕತೆ ಇರುವ ಮೂಲಭೂತ ಸೌಲಭ್ಯಗಳನ್ನು ಹಾಗೂ ಕೋವಿಡ್ 3 ನೇ ಅಲೆ ಎದರಿಸಲು ಅಗತ್ಯವಿರುವ ಚಿಕಿತ್ಸಕ ಪರಿಕರಗಳನ್ನು ಒದಗಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಹೇಳಿದರು . 

ಇಂದು ನಗರದ ಸರ್.ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 


ಈಗಾಗಲೇ 6 ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಕುಂದು ಕೊರತೆಗಳನ್ನು ಪಟ್ಟಿ ಮಾಡಿಕೊಂಡಿದ್ದೇನೆ . ಶೀಘ್ರದಲ್ಲಿ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು . ಜಿಲ್ಲಾ ಎಸ್ , ಎನ್.ಆರ್ ಆಸ್ಪತ್ರೆಯು ಮೈಸೂರು ಮಹಾರಾಜರ ಕಾಲದಲ್ಲಿ ಕಟ್ಟಿದ್ದು , ಇದಕ್ಕೆ ಹೊಸ ರೂಪ ನೀಡಲಾಗುವುದು ಎಂದು ತಿಳಿಸಿದರು. 


ಮಾಲೂರು ಆಸ್ಪತ್ರೆಗೆ ಕಟ್ಟಡದ ಅವಶ್ಯಕತೆ ಇದ್ದು , ವಿದ್ಯುತ್‌ಚ್ಛಕ್ತಿ ಮಂಡಳಿಗೆ ಸೇರಿದ 10 ಗುಂಟೆ ಜಾಗವನ್ನು ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು . ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಐ.ಸಿ.ಯು ಬೆಡ್‌ಗಳನ್ನು ಹೆಚ್ಚಿಸಲಾಗುವುದು ಮಕ್ಕಳಿಗೆ ಅವಶ್ಯಕತೆ ಇರುವ ವೆಂಟಿಲೇಟರ್‌ಗಳನ್ನು ಒದಗಿಸಲಾಗುವುದು . ಜಿಲ್ಲೆಯ ಜನತೆ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾದರೆ ಅವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿಯೆ ಎಲ್ಲಾ ರೀತಿಯ ಚಿಕಿತ್ಸೆ ನೀಡುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಕೋಲಾರ ಜಿಲ್ಲೆಯ ರೈತರು ಬೆಳೆದ ಕೃಷಿ ಉತ್ಪನ್ನಗಳು ಹಾಗೂ ತರಕಾರಿಗಳಿಗೆ ಉತ್ತಮ ಬೆಲೆ ದೊರೆಯುವಂತೆ ಕ್ರಮ ವಹಿಸಲಾಗುವುದು . ರಾಜ್ಯದಲ್ಲಿ ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್ ಬಿಟ್ಟರೆ ಬೇರೆ ದೊಡ್ಡ ಉದ್ಯಾನವನಗಳಿಲ್ಲ . 3 ನೇ ದೊಡ್ಡ ಉದ್ಯಾನವನವನ್ನು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು . ಆಕರ್ಷಕ ಪಥಸಂಚಲನದಲ್ಲಿ 6 ತಂಡಗಳಾದ ಡಿ.ಆರ್.ಪೋಲೀಸ್ ತಂಡ , ಉಪ ವಿಭಾಗ ಪೋಲೀಸ್ ತಂಡ ಕೋಲಾರ , ಉಪ ವಿಭಾಗ ಪೋಲೀಸ್ ತಂಡ ಮುಳಬಾಗಿಲು , ಜಿಲ್ಲಾ ಮಹಿಳಾ ಪೊಲೀಸ್ ತಂಡ , ಪುರುಷ ಗೃಹ ರಕ್ಷಕದಳ ತಂಡ ಹಾಗೂ ಮಹಿಳಾ ಗೃಹ ರಕ್ಷಕ ದಳ ತಂಡಗಳು ಭಾಗವಹಿಸಿದ್ದವು . ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿದ ಆಸ್ಪತ್ರೆಗಳಾದ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆ , ಸಾರ್ವಜನಿಕ ಆಸ್ಪತ್ರೆ ಶ್ರೀನಿವಾಸಪುರ , ಸಾರ್ವಜನಿಕ ಆಸ್ಪತ್ರೆ ಕೆ.ಜಿ.ಎಫ್ , ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಶ್ರೀನಿವಾಸಪುರ ತಾಲ್ಲೂಕಿನ ಮುತ್ತಕಪಲ್ಲಿ , ಕೋಲಾರ ತಾಲ್ಲೂಕಿನ ಅಣ್ಣೆಪಳ್ಳಿ , ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ , ಮುಳಬಾಗಿಲು ತಾಲ್ಲೂಕಿನ ಉತ್ತನೂರು , ಕೆ.ಜಿ.ಎಫ್ ತಾಲ್ಲೂಕಿನ ಅಂಡರ್ ಸನ್ ಪೇಟೆ , ಮಾಲೂರು ತಾಲ್ಲೂಕಿನ ದೊಡ್ಡ ಶಿವಾರ ಹಾಗೂ ಖಾಸಗಿ ಆಸ್ಪತ್ರೆಯಾದ ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಪ್ರಶಸ್ತಿ ಪ್ರಮಾಣ ಪತ್ರ ಸಚಿವರು ನೀಡಿದರು . ಕೋವಿಡ್ -19 ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ಆರೋಗ್ಯ ಇಲಾಖೆ , ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ ಪೌರ ಕಾರ್ಮಿಕರಿಗೆ , ಪೊಲೀಸ್ ಇಲಾಖೆ , ಗೃಹ ರಕ್ಷಕ ದಳ , ಭಾರತ್ ಸ್ಟೇಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಪುರಸ್ಕಾರ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಗಳಿಸಿದ ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ಕೋವಿಡ್ -19 ಸೋಂಕಿಗೆ ಒಳಪಟ್ಟು ಗುಣಮುಖರಾದ ಹಿರಿಯರಿಗೆ ಸಚಿವರು ಸನ್ಮಾನಿಸಿದರು . ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕಗಳಿಸಿ ಜಿಲ್ಲೆಗೆ ಕೀರ್ತಿ ತಂದ ಇಬ್ಬರು ವಿದ್ಯಾರ್ಥಿಗಳಿಗೆ ಲಾಪ್‌ಟಾಪ್ ನೀಡುವುದಾಗಿ ತಿಳಿಸಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀನಿವಾಸಗೌಡ ಅವರು ವಹಿಸಿದ್ದರು . ಕಾರ್ಯಕ್ರಮದಲ್ಲಿ ಸಂಸದ ಎಸ್.ಮುನಿಸ್ವಾಮಿ , ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ , ಇಂಚರ ಗೋವಿಂದರಾಜು , ನಗರಸಭೆ ಅಧ್ಯಕ್ಷರಾದ ಶ್ವೇತಾಶಬರೀಶ್ , ಜಿಲ್ಲಾಧಿಕಾರಿಗಳಾದ ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು , ಅಪರ ಜಿಲ್ಲಾಧಿಕಾರಿಗಳಾದ ಡಾ.ಸ್ನೇಹಾ ಸೇರಿದಂತೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು