8:29 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸರಕಾರಿ ಬಸ್ಸಿನಲ್ಲಿ ಹೆತ್ತಳಾ ತಾಯಿ!: ಹೆಣ್ಣು ಮಗುವಿಗೆ ಜನ್ಮ; ಮಾನವೀಯತೆ ಮೆರೆದ ಚಾಲಕ ಮತ್ತು ನಿರ್ವಾಹಕಿ

16/05/2023, 19:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಗರ್ಭಿಣಿ ಮಹಿಳೆಯೊಬ್ಬರು ಹೆಣ್ಣು ಮಗುವಿನ ಜನ್ಮ ನೀಡಿದ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗ ಮಧ್ಯೆ ಸಾರಿಗೆ ಬಸ್‌ನಲ್ಲಿ ನಡೆದಿದೆ.
ಕೂಲಿ ಕೆಲಸಕ್ಕೆ ಮೂಡಿಗೆರೆಗೆ ತೆರಳುತ್ತಿದ್ದ ಬಿಹಾರ ಮೂಲದ ಗರ್ಭಿಣಿ ಮಹಿಳೆಗೆ ಬಸ್‌ನಲ್ಲೇ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಚಾಲಕರು ಬಸ್ ನಿಲ್ಲಿಸಿದರು. ಬಸ್ ನಿರ್ವಾಹಕಿ ವಸಂತ ಹಾಗೂ ಬಸ್‌ನಲ್ಲಿದ್ದ ಬೆಂಗಳೂರು ಮೂಲದ ಮಹಿಳೆ ಹಾಗೂ ಪ್ರಯಾಣಿಕರು ಸಹಕರಿಸಿದರು.ನಂತರ 108 ಅಂಬ್ಯಲೆನ್ಸ್‌ಗೆ ಪ್ರಯಾಣಿಕ ಸೋಮಶೇಖರ್ ಅವರು ಕರೆ ಮಾಡಿದರು.


ಅಂಬ್ಯುಲೆನ್ಸ್‌ನಲ್ಲಿ ತಾಯಿ ಮಗುವನ್ನು ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿಕೊಟ್ಟ ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ತೆರಳಿ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದರು.
ಕೆಎ-18 ಎಫ್-0865 ನಂಬರ್‌ನ ಸಾರಿಗೆ ಬಸ್
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿತ್ತು.
ಬಸ್‌ನ ಚಾಲಕ, ನಿರ್ವಾಹಕಿ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಯಲದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು