ಇತ್ತೀಚಿನ ಸುದ್ದಿ
ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
29/12/2023, 20:12
ಬಂಟ್ವಾಳ(reporterkarnataka.com): ಪುನರ್ ನಿರ್ಮಾಣಗೊಳ್ಳುತ್ತಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜ.19ರಿಂದ ರವರೆಗೆ 25 ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎಸ್. ಸುಬ್ರಹ್ಮಣ್ಯ ಐತಾಳ್ ಮಂಗಳೂರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಜೀರ್ಣೋದ್ಧಾರ ಸಮಿತಿ ಸಂಚಾಲಕ ಡಾ. ಮೋಹನ್ ಆಳ್ವ ಮೂಡಬಿದಿರೆ ಮಾತನಾಡಿ ಮನೆ ಮನಗಳಲ್ಲಿ ಧಾರ್ಮಿಕ ವಾತವರಣವನ್ನು ನಿರ್ಮಿಸಿಕೊಳ್ಳಬೇಕು, ಏಕ ಮನಸ್ಸಿನಿಂದ ನಾವೆಲ್ಲರೂ ಸೇರಿ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಬೇಕು. ವೈದಿಕ ವಿಧಿವಿಧಾನ, ಅನ್ನ ಸಂತರ್ಪಣೆ, ಹೊರೆಕಾಣಿಕೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಯತಾವತ್ತಾಗಿ ನಡೆಯಲು ನಾವೆಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಮಾಜಿ ಸಚಿವ ಬಿ. ರಮನಾಥ ರೈ ಮಾತನಾಡಿ ದೈವೇಚ್ಚೇಯಂತೆ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಸುಗಮವಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ರವಿಶಂಕರ್ ಶೆಟ್ಟಿ ಬಡಾಜೆಗುತ್ತು ಮಾತನಾಡಿ ಭಕ್ತಿ ಇದ್ದಾಗ ದೇವಸ್ಥಾನ ನಿರ್ಮಾಣ ಕಾರ್ಯ ಸುಸೂತ್ರವಾಗಿ ನಡೆಯುತ್ತದೆ ಎಂದು ತಿಳಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎಸ್. ಶೆಟ್ಟಿ ಸರಪಾಡಿ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಉಪ್ಪಿನಂಗಡಿಯ ದಂತ ವೈದ್ಯ ಡಾ. ರಾಜರಾಂ ಕೋಂಗುಜೆ, ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸಂಜೀವ ಪೂಜಾರಿ ಕಟ್ಟದಡೆ, ನರಸಿಂಹ ಐತಾಳ್ ಅರಮನೆ, ಅರ್ಚಕ ಶಂಕರ ನಾರಾಯಣ ಹೊಳ್ಳ,ಕೋಶಾಧಿಕಾರಿ ವಿಜಯಕೃಷ್ಣ ಐತಾಳ್,ಮೋಕ್ತೇಸರರಾದ ಉಮೇಶ್ ಆಳ್ವ ಕೊಟ್ಟುಂಜ,ವಿಠಲ ಎಂ. ಆರುಮುಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಶೆಟ್ಟಿ ಸರಪಾಡಿ ಕಾರ್ಯಕ್ರಮ ನಿರೂಪಿಸಿದರು. ಜೀರ್ಣೊದ್ಧಾರ ಸಮಿತಿ ಕಾರ್ಯದರ್ಶಿ ರಾಧಾಕೃಷ್ಣ ರೈ ಕೊಟ್ಟುಂಜ ವಂದಿಸಿದರು.