4:58 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

14/12/2025, 22:06

ಬಂಟ್ವಾಳ(reportetkarnataka.com): ಅಕ್ರಮ ಗೋಸಾಗಾಟದ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಬಂಟ್ವಾಳದ ಸರಪಾಡಿ ಎಂಬಲ್ಲಿ ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ್ದಾರೆ.

ಭಾನುವಾರ ಸಂಜೆ ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ತೆರಳಿ, KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿರುತ್ತದೆ. ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ, ಅತನು ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದು, ಬಂಟ್ವಾಳ ಸರಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ. ಮುಂದಿನ ಕಾನೂನುಕ್ರಮಕ್ಕಾಗಿ ಜಾನುವಾರು, ಅಟೋ ಹಾಗೂ ಒಂದು ಮೊಬೈಲ್ ಫೋನ್ ನ್ನು ವಶಕ್ಕೆ ಪಡೆದು, ಅರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿ ಭೋಜ ಮೂಲ್ಯ ರವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು