8:38 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು