ಇತ್ತೀಚಿನ ಸುದ್ದಿ
ಸರಕಾರಿ ಬಸ್- ಕಾರು ಮುಖಾಮುಖಿ ಡಿಕ್ಕಿ: ತಾಯಿ- ಮಗ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ
13/08/2023, 13:39
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.ಕಂ
ಸರಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ದಾರುಣ ಘಟನೆ ನಡೆದಿದೆ.
ಮೃತರನ್ನು ಮೂಲತಃ ಬೆಂಗಳೂರಿನ ಕೋಣನಕುಂಟೆಯವರಾದ
ಪೂಜಾ ಹಿರೇಮಠ್ ಹಾಗೂ ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳು. ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ಈ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ ಶಿವಯಾಗಯ್ಯ ಹಿರೇಮಠ್ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಕಾರು ಬೆಂಗಳೂರಿಗೆ ತೆರಳುತ್ತಿತ್ತು.
ಸಖಲೇಪುರದಿಂದ ಮೂಡಿಗೆರೆ ಕಡೆಗೆ ಸರ್ಕಾರಿ ಬಸ್ ಬರುತ್ತಿತ್ತು.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.