12:09 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ;  ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ

22/06/2022, 20:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು,  ಹಲವರು ಗಾಯಗೊಂಡಿದ್ದಾರೆ.

ದಾವಣಗೆರೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಕೂಡ್ಲಿಗಿಯಿಂದ ಈಚಲ ಬೊಮ್ಮನಹಳ್ಳಿಗೆ ತೆರಳುತ್ತಿದ್ದ ಅಪೇ ಆಟೋ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನ ಮುಂಬದಿ ಚಕ್ರದ ಟೈರ್ ಸ್ಫೋಟಗೊಂಡಿದ್ದು, ಪರಿಣಾಮ ಬಸ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.  ಆಟೋದಲ್ಲಿದ್ದವರೆಲ್ಲರೂ ಈಚಲ ಬೊಮ್ಮನಹಳ್ಳಿ ವಾಸಿಗಳಾಗಿದ್ದು, ಬಹುತೇಕ ವಿದ್ಯಾರ್ಥಿಗಳಾಗಿದ್ದಾರೆ.

ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತರಾಗಿದ್ದಾರೆ.



ವಿದ್ಯಾರ್ಥಿನಿ ಪುಷ್ಪಲತಾ(22) ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾಳೆ. ಬಳ್ಳಾರಿ ವಿಮ್ಸ್ ಗೆ ದಾಖಲಿಸುವಾಗ ಈಡಿಗರ ಮೀನಾಕ್ಷಿ(30) ಮೃತಪಟ್ಟಿದ್ದಾಳೆ. ರಮೇಶ ಎಂಬುವರು ಎರಡು ಕಾಲುಗಳು ಜಖಂಗೊಂಡಿದ್ದು, ಗಾಯಾಳುಗಾಳಾಗಿರುವ ಸ್ವಾತಿ, ಈಡಿಗರ ಅನುಷಾ, ಅಭಿಲಾಷಾ, ಪ್ರಭಾವತಿ, ಕೆ.ಚಂದನ, ಕೆ.ನಾಗವೇಣಿ ಸೇರಿದಂತೆ ಇತರರು ಗಾಯಗೊಂಡಿದ್ದಾರೆ, ಕೆಲವರನ್ನು ಕೂಡ್ಲಿಗಿ ಹಾಗೂ ಇನ್ನೂ ಕೆಲವರನ್ನು ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಾಗೂ ಕೂಡ್ಲಿಗಿ ಆಸ್ಪತ್ರೆಗೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ, ಸಿಪಿಐ ವಸಂತ ಅಸೋದೆ ಬೆಟ್ಟಿ ನೀಡಿದ್ದಾರೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆಸ್ಪತ್ರೆ ಆವರಣದಲ್ಲಿ ಮೃತರ ಪೋಷಕರ ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು