6:44 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ 

25/07/2022, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ  ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಹೇಳಿದರು.

ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಮೂಡಿಗೆರೆ ತಾಲ್ಲೂಕಿನಲ್ಲಿ 26 ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು ಸೂಕ್ಷ್ಮ ವಲಯ ವ್ಯಾಪ್ತಿಗೆ ಒಪಡಿಸಲಾಗಿದ್ದು, ಇದರಿಂದ ಮಲೆನಾಡಿನ  ಜನ ಜೀವನದ ಬಗ್ಗೆ ಅತೀವ ಪರಿಣಾಮ ಬೀರಿದ್ದು ಕಸ್ತೂರಿರಂಗನ್ ವರದಿಯಿಂದ  ಕಾಫಿ, ಅಡಿಕೆ, ಏಲಕ್ಕಿ, ಕಾಳುಮೆಣಸು ಬೆಳೆಗಾರರ ಬಡ ರೈತರ ಕೂಲಿ ಕಾರ್ಮಿಕರ ಅನ್ನದ ಬಟ್ಟಲನ್ನು ಕಸಿದು ಕೊಳ್ಳಲು ಮುಂದಾಗಿದೆ. ಇದರಿಂದ  ಕೆಜಿಎಫ್ ಹಾಗೂ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿಯು ಜುಲೈ 29 ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿತ್ತು .ಇದನ್ನರಿತ ರಾಜ್ಯ ಸರ್ಕಾರ  ಕಸ್ತೂರಿ ರಂಗನ್ ವರದಿ ಜಾರಿಗೆ ತರದಂತೆ ತಡೆಯಲು ಸಭೆ ನಡೆಸಿ ಮುಖ್ಯಮಂತ್ರಿಗಳ ನಿಯೋಗವು ದಿಲ್ಲಿಯ ಪರಿಸರ ಇಲಾಖೆ ಮುಖಾಂತರ  ಹಸಿರು ಪೀಠಕ್ಕೆ ಅಪಿಡವಿಟ್ ಸಲ್ಲಿಸಿದೆ. ಸರ್ಕಾರದ  ಈ ನಿರ್ಧಾರವನ್ನು ಕೆಜಿಎಫ್ ಹಾಗೂ ಹೋರಾಟ ಸಮಿತಿಯು ಸ್ವಾಗತಿಸಿದೆ. ಇದರಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಬೇಕಾಗಿದ್ದ  ಚಿಕ್ಕಮಗಳೂರು ಜಿಲ್ಲಾ ಬಂದ್ ಅನ್ನು ತಾತ್ಕಾಲಿಕವಾಗಿ ಸದ್ಯಕ್ಕೆ  ಹಿಂಪಡೆದಿದ್ದೇವೆ. ಕಸ್ತೂರಿರಂಗನ್ ವರದಿ ವಿರೋಧಿಸಿ ಹೋರಾಟಗಳು ಜಯ ಸಿಗುವವರೆಗೂ ಮುಂದುವರೆಯುತ್ತವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು