7:09 AM Saturday30 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ ಹೆಚ್ಚುತ್ತಿರುವ ಗರ್ಭಿಣಿಯರ, ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಸರಕಾರದಿಂದ ಸರ್ಜರಿ!! ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

ಇತ್ತೀಚಿನ ಸುದ್ದಿ

ಸರಕಾರಿ ಅಧಿಕಾರಿಗಳ ಭ್ರಷ್ಟಾಚಾರ, ಆದಾಯಕ್ಕಿಂತ ಹೆಚ್ಚು ಆಸ್ತಿ ಬಗ್ಗೆ ದೂರು ದಾಖಲಿಸಿ: ಲೋಕಾಯುಕ್ತ ನೂತನ ಎಸ್ ಪಿ

26/09/2022, 18:58

ಮಂಗಳೂರು(reporterkarnataka.com): ಸರ್ಕಾರದ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ನೇರವಾಗಿ ಲೋಕಾಯುಕ್ತರಿಗೆ ದೂರು ಸಲ್ಲಿಸುವಂತೆ ಮಂಗಳೂರು ಹಾಗೂ ಉಡುಪಿ ವಿಭಾಗದ ನೂತನ ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್  
ಹೇಳಿದರು.

ಸೋಮವಾರ ನಗರದ ಉರ್ವಾಸ್ಟೋರ್ ಸಮೀಪದಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. 

ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದರೆ ಅಥವಾ ಗಳಿಕೆಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದರೆ ಅವರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರ ಕರ್ನಾಟಕ ಲೋಕಾಯುಕ್ತವನ್ನು 2022ರ ಸೆ.9ರಿಂದ ಮತ್ತಷ್ಟು ಬಲಿಗೊಳಿಸುವುದರೊಂದಿಗೆ, ಪೊಲೀಸ್ ಠಾಣಾ ಅಧಿಕಾರದ ಜೊತೆಗೆ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಹೆಚ್ಚಿನ ಕೆಲಸ ಮಾಡುವ ಅಧಿಕಾರ ನೀಡಿದೆ. ಯಾರಾದರೂ ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ, ಅಕ್ರಮ ಆಸ್ತಿ ಗಳಿಕೆ, ಅಧಿಕಾರ ದುರ್ಬಳಕೆ ಅಥವಾ ಕೆಲಸ ಮಾಡಿಕೊಡಲು ಹಣ ಕೇಳುತ್ತಿರುವ ಬಗ್ಗೆ ದೂರು ಬಂದರೆ ಅವರು ಆ ವ್ಯಕ್ತಿಯ ವಿರುದ್ಧ ದೂರು ನೀಡಿದರೆ ಅವರ  ವಿರುದ್ಧ ತನಿಖೆ ಆರಂಭಿಸಿಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಲೋಕಾಯುಕ್ತ ಮಂಗಳೂರು ವಿಭಾಗ ಎಂದರೆ ಮಂಗಳೂರು ಹಾಗೂ ಉಡುಪಿ ಜಿಲ್ಲೆ ಎರಡು ಜೊತೆಗೂಡುತ್ತದೆ. ಈಗಾಗಲೇ ಎಸಿಬಿ ಯಲ್ಲಿರುವ ಹಳೆಯ ಪ್ರಕರಣಗಳನ್ನು ಲೋಕಯುಕ್ತಕ್ಕೆ ವರ್ಗಾವಣೆ ಮಾಡುವ ಕಾರ್ಯ ನಡೆಯುತ್ತಿದೆ. ವರ್ಗಾವಣೆಯಾದ ಬಳಿಕ ಇರುವ ಪ್ರಕರಣಗಳ ವಿರುದ್ಧ ತನಿಖೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈಗಾಗಲೇ ಮಂಗಳೂರು ವಿಭಾಗದಲ್ಲಿ 2 ಡಿವೈಎಸ್ಪಿ ಹಾಗೂ 1 ಇನ್ಸ್‍ಪೆಕ್ಟರ್ ಹುದ್ದೆ ಇದ್ದರೆ 1 ಇನ್ಸ್‍ಪೆಕ್ಟರ್ ಹಾಗೂ 6 ಪಿಸಿ ಗಳ ಹುದ್ದೆಗಳು ಖಾಲಿ ಉಳಿದಿದೆ. ಉಡುಪಿಯಲ್ಲಿ 1 ಡಿವೈಎಸ್ಪಿ ಹಾಗೂ 1 ಇನ್ಸ್ಪೆಕ್ಟರ್ ಹುದ್ದೆ ಇರುತ್ತದೆ. ಇದರಲ್ಲಿ 1 ಇನ್ಸ್‍ಪೆಕ್ಟರ್ ಹುದ್ದೆ ಖಾಲಿಯಿದೆ. ಈ ಖಾಲಿ ಇರುವ ಹುದ್ದೆಗಳನ್ನು  ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು. ಲೋಕಾಯುಕ್ತಕ್ಕೆ ಈಗ ಹೆಚ್ಚಿನ ಅಧಿಕಾರ ನೀಡಿರುವ ಜೊತೆಗೆ ಪಿಸಿ ಕಾಯಿದೆ (ಭ್ರಷ್ಟಾಚಾರ ನಿರ್ಮೂಲನಾ ಕಾಯಿದೆ)ಯ ಹೊಣೆಗಾರಿಕೆ ಕೂಡ ಲೋಕಾಯುಕ್ತಕ್ಕೆ ದೊರಕಿದೆ. ಇನ್ನುಳಿದಂತೆ ಪೊಲೀಸ್ ಠಾಣೆಯ ರೀತಿಯಲ್ಲಿ ಲೋಕಾಯುಕ್ತ ಇನ್ನು ಮುಂದೆ ಕಾರ್ಯಾಚರಣೆಯನ್ನು ನಡೆಸುತ್ತದೆ. ಭ್ರಷ್ಟಾಚಾರದ ವಿರುದ್ದ ದೂರು ನೀಡಿದರೆ  ಅದರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಎಸಿಬಿಗಿಂತ ಮೊದಲು ಲೋಕಾಯುಕ್ತ ಅಧಿಕಾರದಲ್ಲಿದ್ದಾಗ ಮಂಗಳೂರು ವಿಭಾಗ 12 ಪ್ರಕರಣಗಳಿಗೆ ಶಿಕ್ಷೆ ವಿಧಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಲೋಕಾಯುಕ್ತದ ಉಡುಪಿ ಡಿವೈಎಸ್ಪಿ ಜಗದೀಶ್, ಮಂಗಳೂರು ಡಿವೈಎಸ್ಪಿ ಚಲುವರಾಜು, ಕಲಾವತಿ, ಉಡುಪಿ ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಹಾಗೂ ಮಂಗಳೂರು ಪೊಲೀಸ್ ನಿರೀಕ್ಷಕ ಎನ್. ಅಮಾನುಲ್ಲಾ ಗೋಷ್ಠಿಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು