3:18 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಉಚಿತ ಪ್ರಯಾಣ; ಗುರುತು ಚೀಟಿ ಕಡ್ಡಾಯ: ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪುನರುಚ್ಚಾರ

12/07/2023, 19:02

ಮಂಗಳೂರು (reporterkarnataka.com): ಸರಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸಂದರ್ಭದಲ್ಲಿ ಗುರುತು ಚೀಟಿ ತೋರಿಸುವುದು ಕಡ್ಡಾಯ ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ರಾಜ್ಯದ ಎಲ್ಲಾ ಮಹಿಳೆಯರಿಗೆ (ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಮತ್ತು ತೃತೀಯ ಲಿಂಗಿಗಳು ಒಳಗೊಂಡಿರುವಂತೆ) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ, ಸಾಮಾನ್ಯ ಸಾರಿಗೆ ಹಾಗೂ ವೇಗದೂತ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿದೆ.
2023ರ ಜೂನ್11ರಿಂದ ಶಕ್ತಿ ಯೋಜನೆ ಜಾರಿಯಾಗಿರುತ್ತದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ಆಧಾರ್ ಕಾರ್ಡ್, ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ವಾಸ್ಥಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು/ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ/ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ ಅಥವಾ ಕರ್ನಾಟಕ ಸರ್ಕಾರದ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿಗಳಲ್ಲಿ ಯಾವುದಾದರೂ ಒಂದು ದಾಖಲಾತಿಯನ್ನು ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣ ಸಂದರ್ಭದಲ್ಲಿ ಗುರುತಿನ ಚೀಟಿಯ ಮೂಲ, ನಕಲು, ಡಿಜಿಲಾಕರ್(ಹಾರ್ಡ್ ಮತ್ತು ಸಾಪ್ಟ್ ಪ್ರತಿ) ಮಾದರಿಯಲ್ಲಿ ಹಾಜರುಪಡಿಸಿ ಪ್ರಯಾಣಿಸಬಹುದು.
ಪ್ರಸ್ತುತ ನಿಗಮದ ವಾಹನಗಳಲ್ಲಿ ಕೆಲವು ಮಹಿಳಾ ಪ್ರಯಾಣಿಕರು ಗುರುತಿನ ಚೀಟಿಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ತೋರಿಸದೆ ಪ್ರಯಾಣಿಸುತ್ತಿರುವುದರಿಂದ ನಿರ್ವಾಹಕರ ಮತ್ತು ಪ್ರಯಾಣಿಕರ ಮಧ್ಯದಲ್ಲಿ ವಾಗ್ವಾದಗಳಾಗಿ ದೂರುಗಳು ಬರಲು ಪ್ರಾರಂಭವಾಗಿರುತ್ತದೆ. ಆದುದರಿಂದ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣದ ಸಂದರ್ಭದಲ್ಲಿ ನಿಗದಿಪಡಿಸಲಾದ ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಪ್ರಯಾಣಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ಕರಾರಸಾ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು