7:08 AM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಸರಕಾರಿ ಕೆಲಸ ವಿಳಂಬ: ಡಿ.2ರಂದು ಉಪಲೋಕಾಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ, ವಿಚಾರಣೆ

28/11/2024, 15:01

ಮಂಗಳೂರು(reporterkarnataka.com): ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಡಿಸೆಂಬರ್ 2 ಮತ್ತು 3ರಂದು ಮಂಗಳೂರಿನಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಲಿದ್ದಾರೆ.
ಡಿ.2ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ, ಮಧ್ಯಾಹ್ನ 2:30ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತಿಯ ಆಗಬೇಕಾದ ಕೆಲಸದಲ್ಲಿ ವಿಳಂಬ ಆಗಿದ್ದರೆ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಉಪಲೋಕಯುಕ್ತರಿಗೆ ಸಲ್ಲಿಸಬಹುದು.
ಡಿಸೆಂಬರ್ 3ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 4:30ರ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ಈಗಾಗಲೇ ದಾಖಲಾಗಿರುವ, ತನಿಖೆ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುತ್ತದೆ.
ಜಿಲ್ಲೆಯ ಸಾರ್ವಜನಿಕರು ಅಂದು ನೇರವಾಗಿ ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಆಗಮಿಸಿ ಉಪಲೋಕಾಯುಕ್ತರಿಗೆ ತಮ್ಮ ಅಹವಾಲು ಸಲ್ಲಿಸಬಹುದು. ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿರುವಂತೆ ಕರ್ನಾಟಕ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು