10:28 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ನೂತನ ಕಟ್ಟಡದ ಮೇಲ್ಚಾವಣಿ ಕುಸಿತ: 1ನೇ ತರಗತಿ ವಿದ್ಯಾರ್ಥಿ ತಲೆಗೆ ತೀವ್ರ ಗಾಯ

11/07/2024, 21:29

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು-08 ಹಟ್ಟಿ ಚಿನ್ನದ ಗಣಿ ಸಮೀಪದ ಆನ್ವರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆ ಅಷ್ಟೇ ನಿರ್ಮಾಣಗೊಂಡ ಶಾಲಾ ಕೊಠಡಿ ಕುಸಿದು ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗಾಯಾಳು ವಿದ್ಯಾರ್ಥಿ ದಾಖಲಿಸಲಾಗಿದ್ದು 5 ಹೊಲಿಗೆಗಳು ಹಾಕಲಾಗಿದೆ.
ನೂತನವಾಗಿ ನಿರ್ಮಾಣಗೊಂಡ ಕಟ್ಟಡ ಸಂಪೂರ್ಣವಾಗಿ ಕಳಪೆಯಾಗಿದ್ದು, ಈ ಘಟನೆಯ ಹೊಣೆಯನ್ನು ಕಟ್ಟಡ ನಿರ್ಮಾಣದ ಗುತ್ತಿಗೆದಾರರು ಹಾಗೂ ಶಾಸಕರು ಮತ್ತು ಸಂಬಂಧಪಟ್ಟ ಇಲಾಖೆಯವರೆ ಹೊರಬೇಕು ಕಾರಣ ಇವರಗಳ ಮೇಲೆ ಸೂಕ್ತ ಕಾನೂನು ಕ್ರಮ ಆಗಬೇಕು. ಗುತ್ತಿಗೆದಾರನ ಲೈಸೆನ್ಸ್ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ಒತ್ತಾಯಿಸಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಯ ಸಂಪೂರ್ಣ ಆಸ್ಪತ್ರೆ ವೆಚ್ಚವನ್ನು ಸಂಬಂಧಪಟ್ಟ ಇಲಾಖೆ ಹಾಗೂ ತಾಲೂಕಾ ಆಡಳಿತ ಕೊಡಬೇಕು. ನಿರ್ಲಕ್ಷ್ಯವಹಿಸಿದರೆ ಬಿಇಓ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜೈ ಭೀಮ್ ಯುವಸೇನೆ ಹಟ್ಟಿ. ಪ್ರಧಾನ ಕಾರ್ಯದರ್ಶಿ ಸುರೇಶ ಮಾಚನೂರು, ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ಕಡೇಚೂರು ಹಾಗೂ ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ರಾಂಪುರ್ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು