9:49 PM Monday2 - November 2026
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ…

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ನೂತನ ಕಟ್ಟಡದ ಮೇಲ್ಚಾವಣಿ ಕುಸಿತ: 1ನೇ ತರಗತಿ ವಿದ್ಯಾರ್ಥಿ ತಲೆಗೆ ತೀವ್ರ ಗಾಯ

11/07/2024, 21:29

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು-08 ಹಟ್ಟಿ ಚಿನ್ನದ ಗಣಿ ಸಮೀಪದ ಆನ್ವರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆ ಅಷ್ಟೇ ನಿರ್ಮಾಣಗೊಂಡ ಶಾಲಾ ಕೊಠಡಿ ಕುಸಿದು ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗಾಯಾಳು ವಿದ್ಯಾರ್ಥಿ ದಾಖಲಿಸಲಾಗಿದ್ದು 5 ಹೊಲಿಗೆಗಳು ಹಾಕಲಾಗಿದೆ.
ನೂತನವಾಗಿ ನಿರ್ಮಾಣಗೊಂಡ ಕಟ್ಟಡ ಸಂಪೂರ್ಣವಾಗಿ ಕಳಪೆಯಾಗಿದ್ದು, ಈ ಘಟನೆಯ ಹೊಣೆಯನ್ನು ಕಟ್ಟಡ ನಿರ್ಮಾಣದ ಗುತ್ತಿಗೆದಾರರು ಹಾಗೂ ಶಾಸಕರು ಮತ್ತು ಸಂಬಂಧಪಟ್ಟ ಇಲಾಖೆಯವರೆ ಹೊರಬೇಕು ಕಾರಣ ಇವರಗಳ ಮೇಲೆ ಸೂಕ್ತ ಕಾನೂನು ಕ್ರಮ ಆಗಬೇಕು. ಗುತ್ತಿಗೆದಾರನ ಲೈಸೆನ್ಸ್ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ಒತ್ತಾಯಿಸಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಯ ಸಂಪೂರ್ಣ ಆಸ್ಪತ್ರೆ ವೆಚ್ಚವನ್ನು ಸಂಬಂಧಪಟ್ಟ ಇಲಾಖೆ ಹಾಗೂ ತಾಲೂಕಾ ಆಡಳಿತ ಕೊಡಬೇಕು. ನಿರ್ಲಕ್ಷ್ಯವಹಿಸಿದರೆ ಬಿಇಓ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜೈ ಭೀಮ್ ಯುವಸೇನೆ ಹಟ್ಟಿ. ಪ್ರಧಾನ ಕಾರ್ಯದರ್ಶಿ ಸುರೇಶ ಮಾಚನೂರು, ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ಕಡೇಚೂರು ಹಾಗೂ ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ರಾಂಪುರ್ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು