1:28 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸಾರ್ವಜನಿಕರ ಬೇಡಿಕೆಯ ಕಾಮಗಾರಿಗೆ ದಾಖಲೆ ಪ್ರಮಾಣದ ಅನುದಾನ ಬಿಡುಗಡೆ: ಶಾಸಕ ವೇದವ್ಯಾಸ ಕಾಮತ್

16/01/2023, 22:41

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿ ದಾಖಲೆ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಮಾನವಾಗಿ ಅನುದಾನ ಬಿಡುಗಡೆಗೊಳಿಸಿದ್ದೇನೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಾಲಿಕೆಯ ಪದವಿಪೂರ್ವ ವಾರ್ಡಿನ ಬೈತುರ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ 32 ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ರಾಜ್ಯದಲ್ಲಿ ಅಭಿವೃದ್ಧಿ ಪರ ಸರಕಾರದ ಆಡಳಿತವಿರುವ‌ ಕಾರಣ ಜನೋಪಯೋಗಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿವೆ. ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನಮ್ಮ ಪ್ರಯತ್ನ ಸಾಗುತಿದ್ದು ಮುಂಬರುವ ದಿನಗಳಲ್ಲಿ ಇದರ ಫಲಿತಾಂಶ ಸಿಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್, ಸತೀಶ್ ಬೈತುರ್ಲಿ, ರಾಜೇಂದ್ರ, ಗಣೇಶ್ ಆಚಾರ್ಯ, ಬೇಬಿಯಣ್ಣ, ಸೋಮನಾಥ ಚೌಕಿ, ಹರಿಣಿ ಪ್ರೇಮ್, ದಿನೇಶ್ ಜ್ಯೋತಿನಗರ, ರಾಮದಾಸ್, ಕೇಶವ ಚೌಕಿ, ಅರುಣ್ ರಾವ್, ಪ್ರೇಮನಾಥ, ಪ್ರೀಯಾಂಕ, ಬಾಬಣ್ಣ, ಲಕ್ಷ್ಮಣ, ಸುಮಿತ್ರ, ದೇಜಪ್ಪ, ಸುಜಾತ, ಲೀಲಾವತಿ, ಉದಯ, ಹರೀಶ್, ರುಕ್ಸಾನ, ಹರಿಣಿ ರಾಮದಾಸ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು