9:44 AM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ

15/10/2021, 20:05

ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ  ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ.


ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ
ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ.

ದಸರಾ ಪಿಲಿನಲಿಕೆ: ಸರಕಾರದ ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಇರುವುದಿಲ್ಲ.  ಆದುದರಿಂದ ಮೆರವಣಿಗೆಯಲ್ಲಿ ವರ್ಷಂಪ್ರತಿ ದೇವಿಗೆ ಹುಲಿನರ್ತನ ಮೂಲಕ‌ ಸೇವೆ ನೀಡುವ ತಂಡಗಳಿಗೆ ಇಂದು ಮಧ್ಯಾಹ್ನ 3.30ರಿಂದ 7ರವರೆಗೆ ದಸರಾ ಪಿಲಿನಲಿಕೆ ಪ್ರದರ್ಶನ ನೀಡಿದವು.

ಕ್ಷೇತ್ರದ ಸಂತೋಷಿ ಕಲಾ ಮಂಟಪದ ಎದುರು ಹಾಕಿರುವ ಬೃಹತ್ ವೇದಿಕೆಯಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು