3:58 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಸಾವರ್ಕರ್ ಭಾವಚಿತ್ರ ಅಳವಡಿಸಲು ಸಿದ್ಧರಾಮಯ್ಯರ ಅನುಮತಿ ಬೇಕಾಗಿಲ್ಲ: ಶಾಸಕ ವೇದವ್ಯಾಸ್ ಕಾಮತ್ 

18/08/2022, 18:26

ಮಂಗಳೂರು(reporterkarnataka.com): ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್ ಭಾವಚಿತ್ರ ಏಕೆ ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ 

ಕಾಮತ್, ಮುಸಲ್ಮಾನರ ಏರಿಯಾಗಳಲ್ಲಿ ಸಾವರ್ಕರ್ ಚಿತ್ರ ಯಾಕೆ ಎನ್ನುವ ಸಿದ್ಧರಾಮಯ್ಯನವರೇ ಮುಸಲ್ಮಾರ ಏರಿಯಾಗಳು ಪಾಕಿಸ್ಥಾನದಲ್ಲಿವೆಯಾ ? ಭಾರತದಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಭಾವಚಿತ್ರ ಬಳಸುವುದಕ್ಕೆ ಸಿದ್ಧರಾಮಯ್ಯ ಅಥವ ಕಾಂಗ್ರೇಸಿಗರ ಅನುಮತಿ ಬೇಕಿಲ್ಲ ಎಂದು ಹೇಳಿದ್ದಾರೆ.

ಸುಮ್ಮನೆ ಎರಡೆರಡು ಜೀವಾವಧಿ ಶಿಕ್ಷೆಯ ಬಿರುದು ಪಡೆದವರಲ್ಲ‌ ಸಾವರ್ಕರ್. ಅಂಡಮಾನಿನ ಕಡು ಕತ್ತಲೆ ಕೋಣೆಯೊಳಗೂ ಸ್ವಾತಂತ್ರ್ಯದ ಕುರಿತು ಚಿಂತಿಸುತ್ತಿದ್ದ ಅವರನ್ನು ವಿರೋಧಿಸುವ ಹಕ್ಕು ಯಾರಿಗೂ ಇಲ್ಲ. ಈ ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಸವೆಸಿದ ಕಾರಣಕ್ಕಾಗಿ ಅವರನ್ನು ಸ್ವಾತಂತ್ರ್ಯ ವೀರ ಎಂದು ಕರೆಯುತ್ತಾರೆಯೇ ವಿನಃ ತಮಗೆ ತಾವೇ ಭಾರತ ರತ್ನ ಕೊಟ್ಟಂತೆ ಪಡೆದ ಬಿರುದಲ್ಲ ಅದು. ಕರಿನೀರ ಶಿಕ್ಷೆ ದೂರದ ಮಾತು, ಐಷಾರಾಮಿ ವ್ಯವಸ್ಥೆಗಳಿದ್ದ ಜೈಲಿನೊಳಗೆ ರಾಜಕೀಯ ಖೈದಿಯಾಗಿ ಸೇರಿ ಅನಾರೋಗ್ಯದ ಕಾರಣ ನೀಡಿ ಕ್ಷಮಾರ್ಪಣೆ ಪತ್ರ ಬರೆದವರು ವೀರ ಸಾವರ್ಕರ್ ಕುರಿತು ಆಡಿಕೊಳ್ಳುವುದು ಹಾಸಾಸ್ಪದ ಎಂದು ಶಾಸಕ ಕಾಮತ್ ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು