5:20 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸತತ ಭೂಕಂಪಕ್ಕೆ ತುತ್ತಾದ ಚೆಂಬು ಗ್ರಾಮದಲ್ಲಿ  ವರುಣನ ಆರ್ಭಟ: ಭಾರೀ ಭೂಕುಸಿತ, ಮನೆಗೆ ತೀವ್ರ ಹಾನಿ

02/07/2022, 20:38

ಮಡಿಕೇರಿ(reporterkarnataka.com): ಸತತವಾಗಿ ನಾಲ್ಕು ಬಾರಿ ಭೂಕಂಪನಕ್ಕೊಳಗಾಗಿರುವ ದ.ಕ ಹಾಗೂ ಕೊಡಗು ಗಡಿ ಪ್ರದೇಶಕ್ಕೆ ಅಂಟಿಕೊಂಡಿರುವ ಚೆಂಬು ಗ್ರಾಮದಲ್ಲಿ ಶನಿವಾರ ಭೂಕುಸಿತ ಉಂಟಾಗಿದ್ದು, ಮನೆಯೊಂದು ಜಖಂಗೊಂಡಿದೆ.

ಶನಿವಾರ ಬೆಳಗಿನ ಜಾವ 3 ಗಂಟೆಗೆ ಚೆಂಬು ಗ್ರಾಮದ ಪೂಜಾರಿಗದ್ದೆ ಗಿರಿಧರ್ ಎಂಬವರ ಮನೆಯ ಮೇಲೆ ಭಾರೀ ಶಬ್ಧದೊಂದಿಗೆ ಮಣ್ಣು ಕುಸಿದಿದ್ದು, ಮನೆಯ ಒಂದು ಭಾಗ ಜಖಂಗೊಂಡಿದೆ.

ಭಾರೀ ಮಳೆ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಚೆಂಬುವಿನಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 192 ಮಿಮೀ ಮಳೆಯಾಗಿದ್ದು, ರಾತ್ರಿಯಿಡೀ ಸುರಿದ ಭಾರೀ ಮಳೆಯೇ ಭೂ ಕುಸಿತಕ್ಕೆ ಕಾರಣವೆಂದು ಹೇಳಲಾಗಿದೆ.

ಚೆಂಬು ಪೆರಾಜೆ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಭೂಕಂಪನವಾಗಿರುವುದರಿಂದ ಮಳೆ ನೀರು ಭೂಮಿಯೊಳಗೆ ಇಂಗಿ ಭೂಕುಸಿತ ಸಂಭವಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯ ಗಡಿಭಾಗದ ಜನರಲ್ಲಿ ಭೂಕಂಪನ ಸಾಕಷ್ಟು ಆತಂಕವನ್ನು ಸೃಷ್ಡಿಸಿದೆ.

ಮತ್ತೆ ಕಂಪನ: ಚೆಂಬುವಿನಲ್ಲಿ ಶನಿವಾರ ಮಧ್ಯಾಹ್ನ 1.21ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು