ಇತ್ತೀಚಿನ ಸುದ್ದಿ
ಸತತ ಮಳೆ: ಮನೆ ಗೋಡೆ ಕುಸಿದು ಯುವಕ ಸ್ಥಳದಲ್ಲೇ ದಾರುಣ ಸಾವು
28/07/2023, 17:32
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಸತತವಾಗಿ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಯುವಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಸಮೀಪ ನಡೆದಿದೆ.
ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ. ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಯುವಕನ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಘಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ನಡೆಸಿದ್ದಾರೆ.ಅಥಣಿ ಶಾಸಕರ ಪರವಾಗಿ ಮುಖಂಡ ಚಿದಾನಂದ ಸವದಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.