5:52 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ: ಶಾಸಕ ವೇದವ್ಯಾಸ ಕಾಮತ್

10/11/2022, 22:31

ಮಂಗಳೂರು(reporterkarnataka.com): ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.

ಕಾಂಗ್ರೆಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ. ಈ ಹಿಂದೆ ಸಿದ್ಧರಾಮಯ್ಯನವರು ತಿಲಕ ಧರಿಸಿದವರನ್ನು ಕಂಡರೆ ಭಯವಾಗುತ್ತದೆ ಎಂದಿದ್ದರು. ಮಾಂಸಾಹಾರ ಸೇವಿಸಿ ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ಕೊಟ್ಟಾಗಲೂ ಉಡಾಫೆಯಿಂದ ವರ್ಸಿದ್ದರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಹಿಂದೂ ಧಾರ್ಮಿಕ ಭಾವನೆಗಳಿಗೆ ವಿರೋಧ ವ್ಯಕ್ತಪಡಿಸುವ‌ ಕಾಂಗ್ರೆಸ್ ನಾಯಕರಿಗೆ ಒಂದು ಹಿಂದೂ ಸಮಾಜವನ್ನು ಅವಹೇಳನ ಮಾಡುವ ಚಾಳಿ ಹಿಡಿದಿದೆ. ಸತೀಶ್ ಜಾರಕಿಹೊಳಿ ಅವರು ಕೇವಲ ಕ್ಷಮೆ ಕೇಳುವುದರಿಂದ ಎಲ್ಲವೂ ಸರಿಪಡಿಸಲಾಗುವುದಿಲ್ಲ‌. ಕಾಂಗ್ರೆಸ್ ನಾಯಕರಿಗೆ ನಿಜವಾಗಿಯೂ ಹಿಂದೂ ಧರ್ಮದ ಮೇಲೆ ಗೌರವವಿದ್ದರೆ ಕಾಂಗ್ರೆಸ್ ಕಾರ್ಯಾಧ್ಯಕ್ಷರನ್ನು ವಜಾಗೊಳಿಸಲಿ ಎಂದು ಶಾಸಕ ಕಾಮತ್ ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು