1:21 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ

22/07/2026, 21:35

ನವದೆಹಲಿ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ.
ಸೌಜನ್ಯ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿತು. ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮಂದುವರಿಸಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದೆ.
ಪ್ರಕರಣದ ಮರುತನಿಖೆಗೆ ಸಮ್ಮತಿ ಸೂಚಿಸಿರುವ ಸುಪ್ರೀಂ ಕೋರ್ಟ್, ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ ಏಜೆನ್ಸಿ ಮೂಲಕ ನಡೆಸಬೇಕು ಎಂಬುದರ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ರಾಜ್ಯ ಸರ್ಕಾರವು ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲು ಸಂಪೂರ್ಣ ಸಿದ್ಧವಿರುವುದಾಗಿ ತಿಳಿಸಿದೆ. ಮತ್ತೊಂದೆಡೆ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇರ ಉಸ್ತುವಾರಿಯಲ್ಲಿಯೇ ಈ ತನಿಖೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ತನಿಖಾ ಸಂಸ್ಥೆ ಹಾಗೂ ತನಿಖೆಯ ಸ್ವರೂಪದ ಕುರಿತು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು