1:50 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಾಣೂರು: ಅಡುಗೆ ಮಾಡುವಾಗ ಬೆಂಕಿ ಆಕಸ್ಮಿಕ‌;  ಆಸ್ಪತ್ರೆಯಲ್ಲಿ ಗಾಯಾಳು ವೃದ್ಧೆ ಸಾವು

09/05/2022, 15:20

ಕಾರ್ಕಳ(reporterkarnataka.com):
ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ‌ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. 

ಸಾಣೂರು ಗ್ರಾಮದ ನಿವಾಸಿ 71 ವರ್ಷದ ಸುಮತಿ ಶೆಟ್ಟಿ ಮೃತ ದುರ್ದೈವಿ. ಇವರು ಏ.4ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಕಟ್ಟಿಗೆ ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಸೀರೆಯ ಸೆರಗಿಗೆ ಬೆಂಕಿ ತಗಲಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡವರನ್ನು ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ಬಂದಿದ್ದರು. ಕೆಲವು ದಿನಗಳ ಬಳಿಕ ಗಾಯ ಮತ್ತೆ ಉಲ್ಬಣಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆ ಹಾಗೂ ಉಡುಪಿ ಅಜ್ಜರಕಾಡಿನ ಆಸ್ಪತ್ರೆ ದಾಖಲಿಸಲಾಗಿತ್ತು. ಆ ನಂತರ ಏ.30ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮತಿ‌ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ.7ರಂದು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು