12:11 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸಾಣೂರು ಮುರತ್ತಂಗಡಿ: ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ಸಾವು

05/04/2022, 13:20

ಕಾರ್ಕಳ(reporterkarnataka.com):
ಮೂಡಬಿದ್ರಿ-ಕಾರ್ಕಳ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. 

ಇರ್ವತ್ತೂರಿನ ಅವಿನಾಶ್(27) ಘಟನೆಯಲ್ಲಿ ಮೃತಪಟ್ಟ ಯುವಕ. ವೃತ್ತಿಯಲ್ಲಿ ಪೈಂಟರ್ ಆಗಿರುವ ಅವಿನಾಶ್ ಪೈಟಿಂಗ್ ಕೆಲಸ ಮುಗಿಸಿ ಮನೆಯ ಕಡೆಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ದೇಹದ ಭಾಗ ಛಿದ್ರಗೊಂಡಿದ್ದು, ಹೊಟ್ಟೆಯ ಭಾಗದಿಂದ ಕರಳು ಹೊರ ಬಿದ್ದಿದೆ.

ಕಾರ್ಕಳ ನಗರ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೆಸಿಬಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿರುವ ಮಾಹಿತಿ ಲಭಿಸಿದೆ. ಅದೇ ಕಾರಣದಿಂದ ಜೆಸಿಬಿ ತೆರವು ಕಾರ್ಯ ಒಂದಿಷ್ಟು ಹೊತ್ತು ವಿಳಂಬವಾಗಿತ್ತಾದರೂ, ಬದಲಿ ಚಾಲಕನ ಸಹಕಾರದಿಂದ ಜೆಸಿಬಿಯನ್ನು ತೆರವುಗೊಳಿಸಿ ಮೃತದೇಹವನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು