5:13 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸಂವಿಧಾನ ಜಾಥಾ: ಬಂಟ್ವಾಳ ತಾಲೂಕಿನ ವಿವಿಧಡೆ ಅದ್ಧೂರಿ ಸ್ವಾಗತ; ಬೀದಿ ನಾಟಕ ಪ್ರದರ್ಶನ

07/02/2024, 11:37

ಬಂಟ್ವಾಳ(reporterkarnataka.com): ಭಾರತ ಸಂವಿಧಾನದ ಆಚರಣೆ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಥಾ ರಥವು ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರ್ ಗ್ರಾಮ ಪಂಚಾಯತ್, ಕೊಲ್ನಾಡು ಗ್ರಾಮಪಂಚಾಯತ್, ವಿಟ್ಲ ನಗರ ಪಂಚಾಯತ್, ಸಾಲೆತ್ತೂರು ಗ್ರಾಮ ಪಂಚಾಯತ್‍ನಲ್ಲಿ ಸಂಚರಿಸಿತು.

ದ.ಕ. ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ,ತಾಲೂಕು ಪಂಚಾಯತ್ ಬೆಳ್ತಂಗಡಿ, ,ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯತ್ ಮೂಲಕ ತಾಲೂಕಿಗೆ ಆಗಮಿಸಿತು. ಸಂಪನ್ಮೂಲ ವ್ಯಕ್ತಿಗಳಾದ ಅರವಿಂದ ಚೊಕ್ಕಾಡಿ ಸಂವಿಧಾನದ ಪ್ರಸ್ತಾವನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ತಹಶೀಲ್ದಾರರು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಕಾರ್ಯನಿರ್ವಹಣಾ ಅಧಿಕಾರಿಗಳು ಅಭಿನಂದಿಸಿದರು. ಮಂಗಳೂರಿನ ಕಲಾ ತಂಡದವರು ಜಾಗೃತಿ ಗೀತೆ ಮತ್ತು ನಾಟಕ ಪ್ರದರ್ಶಿಸಿದರು. ಡಾ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು.
ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಒಳಗೊಂಡ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರವನ್ನು ಪ್ರದರ್ಶಿಸಲಾಯಿತು. ನಾಗರೀಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನೊಳಗೊಂಡ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು