6:35 AM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಸಂವಿಧಾನ ಜಾಥಾಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಪಣೆ

26/01/2024, 19:27

ಮಂಗಳೂರು(reporterkarnataka.com): ಭಾರತ ಸಂವಿಧಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಥಾಗೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು.
ಸಂವಿಧಾನ ಮಹತ್ವದ ಅರಿವು ಮೂಡಿಸಲು ರಾಜ್ಯ ಸರ್ಕಾರದ ನಿರ್ದೇಶನದಂತೆ ಆರಂಭಗೊಂಡಿರುವ ಸಂವಿಧಾನ ಜಾಗೃತಿ ಜಾಥಾಕ್ಕೆ ಸಚಿವರು ಪುರಭವನ ಆವರಣದಲ್ಲಿ ಹಸಿರು ಬಾವುಟ ತೊರಿಸುವ ಮೂಲಕ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಾಯೋಜಕತ್ವದ ವಿವಿಧ ಕಲಾವಿದರು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಮಹತ್ವ ಸಾರುವ ಘೋಷಣೆಗಳನ್ನು ಕೂಗಿ ಪಥ ಸಂಚಲನ ಮಾಡಿ, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಕಲಾ ಮತ್ತು ಸಾಂಸ್ಕಂತಿಕ ಮೆರಗು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಮ್ಮ ಸಂವಿಧಾನವು ಎಲ್ಲ ನಾಗರೀಕರಿಗೂ ರಕ್ಷಣೆ ನೀಡಿದೆ. ದೇಶದಲ್ಲಿ ಅನೇಕ ಪದ್ಧತಿ, ಸಂಸ್ಕೃತಿ, ಜಾತಿ, ಭಾಷೆಗಳಿದ್ದರೂ ಎಲ್ಲರನ್ನೂ ಒಗ್ಗೂಡಿಸಿ ಮುಂದೆ ಸಾಗುತ್ತಿದೆ ಎಂದು ಹೇಳಿದರು.
ರಾಜ್ಯ ಸರಕಾರವು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಮೂಲಕ ದೇಶ ಸ್ಥಾಪನೆಯ ಉದ್ದೇಶವನ್ನು ಈಡೇರಿಸಲು ಹೊರಟಿದೆ. ಈ ದೇಶದಲ್ಲಿ ಸರ್ವರಿಗೂ ಅವಕಾಶವಿದೆ. ಎಲ್ಲರಿಗೂ ನ್ಯಾಯ ಕೊಡಿಸುವ ಜವಾಬ್ದಾರಿ ಸರಕಾರದ ಮೇಲಿದೆ. ನಾಗರೀಕರಿಗೂ ಹಕ್ಕು ಮತ್ತು ಕರ್ತವ್ಯಗಳಿವೆ. ಈ ಎಲ್ಲ ಮಾಹಿತಿಗಳನ್ನು ಸಂವಿಧಾನ ಜಾಥಾದಲ್ಲಿ ಅರಿವು ಮೂಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


ಪಾಲಿಕೆ ವಿರೋಧ ಪಕ್ಷ ನಾಯಕ ಟಿ.ಪ್ರವೀಣ್ ಚಂದ್ರ ಆಳ್ವ,
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಆಯುಕ್ತರಾದ ಅನೂಪ್ ಅಗರವಾಲ್, ಜಿಪಂ ಸಿಇಓ ಡಾ.ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹರ್ಷವರ್ಧನ, ಮಹಾನಗರಪಾಲಿಕೆ ಆಯುಕ್ತ ಆನಂದ್, ಉಪ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಲತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ವಿವಿಧ ಸಂಘಟನೆಗಳ, ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು