3:09 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶಾಲೆ ಕೊಠಡಿ, ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಗುತ್ತೇದಾರ ಪರವಾನಿಗೆ ರದ್ದುಪಡಿಸಲು ಆಗ್ರಹ

16/07/2024, 17:29

ಶಿವು ರಾಠೋಡ ಜೇವರ್ಗಿ ಕಲಬುರಗಿ

info.reporterkarnataka@gmail.com

ಜೇವರ್ಗಿ ತಾಲೂಕಿನ ಚೆನ್ನೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಣೆಗಳು ಮಳೆಯಿಂದ ಸಂಪೂರ್ಣವಾಗಿ ಸೋರುತ್ತಿದ್ದು ಅಲ್ಲೇ ಮಕ್ಕಳು ವಿದ್ಯಾಭ್ಯಾಸ ಮಾಡಲು ಜೀವ ಕೈಯಲ್ಲಿ ಹಿಡಿದುಕೊಂಡು ಅಭ್ಯಾಸ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜೇವರ್ಗಿ ತಾಲೂಕಿನ ಶ್ರೀರಾಮ ಸೇನದ ಅಧ್ಯಕ್ಷರ ಮಲ್ಕಣ್ಣ ಹಿರಿ ಪೂಜಾರಿ ಆರೋಪಿಸಿದ್ದಾರೆ.


ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುವುದರಲ್ಲದೆ ಅಡುಗೆ ಮಾಡಿಸಲು ಸಂಪೂರ್ಣ ಕೋಣೆ ಜಲಾವೃತಗೊಂಡಿದೆ ಈ ಕಾಮಗಾರಿ ಮಾಡಿದ ಗುತ್ತೇದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಅವರ ಗುತ್ತೇದಾರ್ ಪರವಾನಿಗೆಯನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ಕೆಲವೇ ವರ್ಷಗಳಲ್ಲಿ ಈ ರೀತಿ ಮಳೆಯಿಂದ ಸೋರುತ್ತಿದೆ. ಜೊತೆಗೆ ಅಲ್ಲಲ್ಲಿ ಮೇಲ್ಚಾವಣಿ ಕುಸಿದು ಮಕ್ಕಳ ಮೇಲೆ ಬೀಳುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು. ಈ ಕಾಮಗಾರಿ ಮಾಡಿದ ಗುತ್ತೇದಾರರ ಪರವಾನಿಗೆ ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು