3:47 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಸ್ಕೂಟರ್ ನಲ್ಲಿ ಡ್ರಗ್ಸ್ ಮಾರಾಟ: 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶ; ಓರ್ವನ ಬಂಧನ

05/08/2022, 20:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಠಾಣಾ ವ್ಯಾಪ್ತಿಯ ವಳಗೆರನಹಳ್ಳಿಗೆ ಹೋಗುವ ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಂದ ಸುಮಾರು 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ ಮಧ್ಯಾಹ್ನ ಖಚಿತ ಮಾಹಿತಿಯ ಮೇರೆಗೆ ಅಕ್ರಮವಾಗಿ ಗಾಂಜವನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕೋಲಾರ ನಗರದ ಟವರ್‌ ವಾಸಿಯಾದ ನೂರ್‌ಪಾಷ  (50 ) ಎಂಬಾತನನ್ನು ಬಂಧಿಸಿ 21 ಕೆಜಿ ತೂಕದ ಸುಮಾರು 10. 50 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡು ಶ್ರೀನಿವಾಸಪರ ಠಾಣೆಯಲ್ಲಿ ಎನ್‌ಪಿಎಸ್ ಕಾಯ್ದೆ ಅಡಿಯಲ್ಲಿ ಪೊಲೀಸ್ ನಿರೀಕ್ಷಕ ಜಿ.ಸಿ.ನಾರಾಯಣಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ . ಈ ದಾಳಿಯನ್ನು ಜಿಲ್ಲಾ ರಕ್ಷಾಣಧಿಕಾರಿಗಳ ಡಿ.ದೇವರಾಜ್ , ಪೊಲೀಸ್ ಅಧೀಕ್ಷಕ ಸಚಿನ್ ಪಿ . ಘೋರ್ಪಡೆ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಪಿ.ಮುರಳಿಧರ್ ಮುಂದಾಳತ್ವದಲ್ಲಿ ಅಪರಾದ ವಿಭಾಗದ ಎಎಸ್‌ಐ ಅಮೀದ್‌ಖಾನ್ ಹಾಗೂ ಸಿಬ್ಬಂದಿಗಳಾದ ರಾಮಚಂದ್ರ , ಮಂಜುನಾಥ್ , ಸುರೇಶ್ , ವೆಂಕಟಾಚಲಪತಿ , ಷಫೀವುಲ್ಲಾ , ಸಂದೀಪ್ , ರಿಜ್ವಾನ್ , ಸುಬಾನ್ ಆರೋಪಿಯನ್ನು ಬಂಧಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು .

 

ಇತ್ತೀಚಿನ ಸುದ್ದಿ

ಜಾಹೀರಾತು