5:50 PM Friday20 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

ಸಮುದ್ರ ಈಜು ಸ್ಪರ್ಧೆ: ಶ್ರೀನಿವಾಸಪುರದ ಯುವ ಈಜುಗಾರ್ತಿ ಡಿಂಪಲ್ ಸೋನಾಕ್ಷಿ ಚಾಂಪಿಯನ್

26/03/2025, 11:31

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕುಪ್ಪಹಳ್ಳಿ ಗ್ರಾಮದ 14 ವರ್ಷದ ಯುವ ಈಜುಗಾರ್ತಿ ಡಿಂಪಲ್ ಸೋನಾಕ್ಷಿ ಎಂ. ಗೌಡ ಅವರು ಗುಜರಾತ್‌ನ ಅದ್ರಿ ಬೀಚಿನಿಂದ ವೀರವಾಲ್ ಜೆಟ್ಟಿಯವರೆಗೆ ನಡೆದ 30 ಕಿಮೀ ಸಮುದ್ರ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಶ್ರೇಯಸ್ಸು ಸಾಧಿಸಿದ್ದಾರೆ.


ಡಿಂಪಲ್ ಅವರು 2023ರಲ್ಲಿ ರಾಷ್ಟ್ರಮಟ್ಟದ 10 ಕಿಮೀ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಹಾಂಕಾಂಗ್‌ನಲ್ಲಿ ನಡೆದ ಏಷ್ಯನ್ ಈಜು ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅಲ್ಲದೆ, ವಿಜಯದುರ್ಗ, ಮಾಲ್ವನ್ ಮತ್ತು ಪೋರಬಂದರದ ಈಜು ಸ್ಪರ್ಧೆಗಳಲ್ಲೂ ಹಲವು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
*ಒಲಿಂಪಿಕ್ ಕನಸು:*
ಡಿಂಪಲ್ ಸೋನಾಕ್ಷಿ, ವಿಶ್ವ ಚಾಂಪಿಯನ್‌ಷಿಪ್ ಮತ್ತು ಒಲಿಂಪಿಕ್ಸ್‌ನಲ್ಲಿ ಭಾರತಕ್ಕಾಗಿ ಪದಕ ಗೆಲ್ಲುವ ಗುರಿಯೊಂದಿಗೆ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ನಿಹಾರ್ ಅಮೀನ್ ಅವರ ಡಾಲ್ಫಿನ್ ಅಕಾಡೆಮಿಯಲ್ಲಿ ದಿನನಿತ್ಯ ಆರು ಗಂಟೆಗಳ ಈಜು ಅಭ್ಯಾಸ ಮಾಡುತ್ತಿದ್ದಾರೆ.
ಡಿಂಪಲ್ ಅವರ ಸಾಧನೆಗೆ ಅಭಿನಂದನೆಗಳು ಅವರ ಪರಿಶ್ರಮ ಮತ್ತು ಪೋಷಕರ ಬೆಂಬಲದಿಂದ ನಮ್ಮ ಜಿಲ್ಲೆ ಒಲಿಂಪಿಕ್ ಪದಕ ವಿಜೇತರ ಪಟ್ಟಿಯಲ್ಲಿ ಸೇರುವಂತೆ ಹಾರೈಸೋಣ .

ಇತ್ತೀಚಿನ ಸುದ್ದಿ

ಜಾಹೀರಾತು