6:24 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ ಸಚಿವ ಕುಮಾರಸ್ವಾಮಿ

27/04/2026, 22:28

ಕೋಲಾರ(reporterkarnataka.com): ಸಚಿವ ಡಿ.ಸುಧಾಕರ್‌ ಅವರ ಆರೋಗ್ಯದ ವಾಸ್ತವಾಂಶವನ್ನು ರಾಜ್ಯ ಸರ್ಕಾರವು ಜನರ ಮುಂದೆ ಇಡಬೇಕು. ಅವರನ್ನು ನಂಬಿರುವ ಅಭಿಮಾನಿಗಳು, ಕ್ಷೇತ್ರದ ಜನರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದಾರೆ. ಕೋಲಾರದ ಮಾಲೂರು ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲ ದುರ್ಬುದ್ಧಿ ಜನರು ಇರುತ್ತಾರೆ. ಅಂಥ ಜನರಿಂದ ಹೆಬ್ಬಟ್ಟಿನ ಘಟನೆ ನಡೆಯುತ್ತವೆ. ದುರ್ಬಳಕೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ತುಸು ಎಚ್ಚರದಿಂದ ಇರಬೇಕು ಎಂದಷ್ಟೇ ಹೇಳಿದ್ದೆ. ಸುಧಾಕರ್‌ ವಿಚಾರದಲ್ಲಿ ಹೇಳಿದ್ದಲ್ಲ, ನನ್ನ ಮಾತಿನಲ್ಲಿ ಮಾರ್ಮಿಕ ಅರ್ಥವೂ ಇಲ್ಲ’ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿ ಪೈಪೋಟಿ ಕುರಿತು ಪ್ರತಿಕ್ರಿಯಿಸಿ, ‘ದೆಹಲಿಗೆ ತೆರಳಲು 40ರಿಂದ 50 ಶಾಸಕರ ವಿಮಾನದ ಟಿಕೆಟ್‌ ಬುಕ್ಕಿಂಗ್‌ ನಡೆಯುತ್ತಿದೆ. ಮುಖ್ಯಮಂತ್ರಿ ಆಗಬೇಕೆಂದು ಪದೇಪದೇ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ವರ್ಷದಿಂದ ಈ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಸಂಕ್ರಾಂತಿ, ಯುಗಾದಿ ಕ್ರಾಂತಿ ಮಾತು ಮುಗಿದಿದೆ. ಚುನಾವಣೆ ಫಲಿತಾಂಶದ ಬಳಿಕ ಕ್ರಾಂತಿ ಆಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಯಾವ ರೀತಿ ಕ್ರಾಂತಿ ನಡೆಯಬಹುದೆಂದು ನಾನು ಕುತೂಹಲದಿಂದ ಕಾಯುತ್ತಿದ್ದೇನೆ’ ಎಂದು ಹೇಳಿದರು.

ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಏನೆಲ್ಲಾ ವ್ಯವಹಾರ ನಡೆಯುತ್ತಿದೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಒಳಮೀಸಲಾತಿ ವಿಚಾರವನ್ನು ನಾನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲು ಇಷ್ಟಪಡುವುದಿಲ್ಲ. ಈಗಾಗಲೇ ರಾಜ್ಯ ಸರ್ಕಾರವು ವಿಂಗಡಣೆ ಮಾಡಿದ್ದು, ಸಮುದಾಯಕ್ಕೆ ತೃಪ್ತಿಯಾದರೆ ಮುಗಿಯಿತು. ರಾಜಕೀಯವಾಗಿ ನಾನೇಕೆ ಎತ್ತಿಕಟ್ಟಿ ಸಂಘರ್ಷಕ್ಕೆಡೆ ಮಾಡಿಕೊಡಲಿ ಎಂದು ಪ್ರಶ್ನಿಸಿದರು.

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷವಾದ ಡಿಎಂಕೆ ತಕರಾರು ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ ತಮ್ಮ ಪರವಾಗಿ ತೀರ್ಪು ನೀಡಿದ್ದು, ಕೇಂದ್ರ ಸರ್ಕಾರ ಅನುಮತಿ ಕೊಡಿಸಬೇಕೆಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಹೇಳುತ್ತಿದೆ. ಶೀಘ್ರದಲ್ಲೇ ಡಿಪಿಆರ್ ಸಲ್ಲಿಸುವುದಾಗಿಯೂ ಸಚಿವರು ಹೇಳಿದ್ದಾರೆ. ಈಚೆಗೆ ತಮಿಳುನಾಡಿನಲ್ಲಿ ಪ್ರಚಾರ ಕೂಡ ನಡೆಸಿ ಬಂದಿದ್ದಾರೆ. ಡಿಎಂಕೆ ಜೊತೆ ಕುಳಿತು ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದಲ್ಲವೇ? ನ್ಯಾಯಾಲಯಕ್ಕೆ ಹೋಗಬೇಡಿ ಎಂದು ಕೇಳಿಕೊಳ್ಳಬಹುದಲ್ಲವೇ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು